ಅಕ್ರಮ ಮದ್ಯ ಮಾರಾಟ ವಿರೋಧಿಸಿ ಪ್ರತಿಭಟನೆ

0
143

ಚಿಕ್ಕಬಳ್ಳಾಪುರ/ಬಾಗೇಪಲ್ಲಿ : ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ವಿರೋಧಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ ಅಬಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂ. ಸಂಚಾಲಕ ಬಿ.ವಿ. ವೆಂಕಟರವಣ ಮಾತನಾಡಿ ತಾಲ್ಲೂಕಿನ ಬಹುತೇಕ ತಾಂಡಾಗಳಲ್ಲಿ, ದಲಿತ ಕಾಲೋನಿಗಳಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 7 ರ ಡಾಬಾಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಅಕ್ರಮ ಮದ್ಯ ಮಾರಾಟಕ್ಕೆ ಸಹಕರಿಸುತ್ತಿರುವ ಬಾರ್ ಗಳ ಲೈಸೆನ್ಸ್ ಗಳನ್ನು ರದ್ದು ಮಾಡಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಲಕ್ಷ್ಮೀ ನರಸಿಂಹಪ್ಪ, ಮುಖಂಡರಾದ ಜಯಂತ್, ಗೋಪಿ, ಪೈಪಾಳ್ಯ ರವಿ, ರಮೇಶ್, ನರಸಿಂಹಪ್ಪ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here