ಅತ್ಯಾಚಾರ ಎಸಗಿ ಕೊಲೆಗೈದ ದುಷ್ಕಮಿ೯ಗಳಿಗೆ ಉಗ್ರ ಶಿಕ್ಷೆ ನೀಡಿ..

0
115

ವಿಜಯಪುರ/ಸಿಂದಗಿ:ವಿದ್ಯಾರ್ಥಿನಿ ದಾನೇಶ್ವರಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಜಯ ಕನಾ೯ಟಕ ಸಂಘಟನೆ ಯುವ ಘಟಕ ಕಾರ್ಯಕರ್ತರು ತಹಶೀಲದಾರ ಕಾಯಾ೯ಲಯದ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಇದೇ ಸಂದಭ೯ದಲ್ಲಿ ಜಯ ಕನಾ೯ಟಕ ಸಂಘಟನೆ ಜಿಲ್ಲಾಧ್ಯಕ್ಷ ಸುದಶ೯ನ ಜಿಂಗಣ್ಣಿ ಮಾತನಾಡಿ,
ವಿದ್ಯಾರ್ಥಿನಿ ದಾನೇಶ್ವರಿ ಶಾಲೆಗೆ ಹೋಗುವ ಸಂದರ್ಭದಲ್ಲಿ ಹಾಡಹಗಲೇ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆಗೈದಿರುವುದು ಅಮಾನವೀಯ ಕೃತ್ಯವಾಗಿದೆ. ಸಮಾಜದಲ್ಲಿ ಇಂತಹ ಘಟನೆಗಳು ಪದೇ, ಪದೇ ನಡೆಯುತ್ತಿರುವುದರಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಅಲ್ಲದೇ ಇಂತಹ ಘಟನೆ ಮರುಕಳಿಸದಂತೆ ವಿಶೇಷ ಕಾನೂನು ರಚಿಸಲು ಮುಂದಾಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನಿಂಗರಾಜ ಬಗಲಿ, ಮಲ್ಲಿಕಾಜು೯ನ ನಾಟಿಕಾರ, ಶ್ರೀನಿವಾಸ ಬಗಲಿ, ಶಿವು ಗುಣಾರಿ ಇತರರು ಪ್ರತಿಭಟನೆಯಲ್ಲಿ ಇದ್ದರು.

ವರದಿ: ನಮ್ಮೂರು ಟಿವಿ
ನಂದೀಶ ಹಿರೇಮಠ ಸಿಂದಗಿ

LEAVE A REPLY

Please enter your comment!
Please enter your name here