ಅಧಿಕಾರಿಗಳು, ಕಡ್ಡಾಯವಾಗಿ ಭಾಗವಹಿಸುವಂತೆ ಎ ಸಿ ಆದೇಶ

0
182

ಬಳ್ಳಾರಿ/ಹೊಸಪೇಟೆ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಮ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಉಪವಿಭಾಗಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಆದೇಶಿಸಿದ್ದಾರೆ.

ತಾಲ್ಲೂಕು ಪಂಚಾಯ್ತಿ ವಿದ್ಯಾರಣ್ಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಮ್ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮದಲ್ಲಿ ಪ್ರತಿನಿಧಿಗಳನ್ನು ಕಳಿಹಿಸದೇ ಕಡ್ಡಾಯವಾಗಿ ಇಲಾಖಾ ಮುಖ್ಯಸ್ಥರೂ ಭಾಗವಹಿಸಬೇಕು. ಇಲ್ಲವಾದಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಬಹುತೇಕ ಅಧಿಕಾರಿಗಳು,ಪೂರ್ವಭಾವಿ ಸಭೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳ ಆಚರಣೆ ಇತರೆ ಜಯಂತಿ ಕಾರ್ಯಕ್ರಮಗಳಲ್ಲಿ ಬಹುತೇಕ ಅಧಿಕಾರಿಗಳು, ಭಾಗವಹಿಸುವುದಿಲ್ಲ ಎನ್ನುವ ಮಾತುಗಳು ಸಭೆಯಲ್ಲಿ ಕೇಳಿ ಬಂದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಗಳು, ಅಧಿಕಾರಿಗಳಿಗೆ ಕಡಕ್ಕಾಗಿಯೇ ಹೇಳಿದರು.
ಅದ್ಧೂರಿ ಆಚರಣೆ:ಏಪ್ರೀಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಜಗಜೀವನ ರಾಮ್ ಜಯಂತಿ ಆಚರಣೆ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ತಾಲ್ಲೂಕು ಆಡಳಿತ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸಂಘದ ವತಿಯಿಂದ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲು  ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಏ.5 ರಂದು ತಹಶೀಲ್ದಾರ ಕಚೇರಿಯಲ್ಲಿ ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಸಂಕೇತಿಕವಾಗಿ ಆಚರಣೆ ಸೇರಿದಂತೆ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಅವರ ಜಯಂತಿ ಜಂಟಿಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ಆಚರಿಸಲು ಸಭೆ ತೀರ್ಮಾನಿಸಿತು.

ಅಂದು, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಭಾವಚಿತ್ರ ಮೆರವಣಿಗೆ ನಡೆಸುವುದು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಆಯೋಜನೆ. ಸಮಾರಂಭದಲ್ಲಿ ಸ್ಥಳದಲ್ಲಿ ಪರಿಶಿಷ್ಟ ಜಾತಿ ಪಂಗಡ ಸಮುದಾಯ ಜನರಿಗಾಗಿ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಫಲಕ ಹಾಕುವುದು. ದಲಿತಪರ ಚಿಂತಕರು, ಹೋರಾಟಗಾರರು ಹಾಗೂ ರಾಷ್ಟ್ರನಾಯಕರ ಪುಸ್ತಕಗಳ ಪ್ರದರ್ಶನ ಏರ್ಪಡಿಸುವುದು. ವೇದಿಕೆಯಲ್ಲಿ ಎಲ್ಲಾ ಜಾತಿ ಜನಾಂಗದ ಸಮುದಾಯ ಮುಖಂಡರನ್ನು ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ತಹಶೀಲ್ದಾರ ಹೆಚ್‌ವಿಶ್ವನಾಥ, ಸಮಾಜ ಕಲ್ಯಾಣಾಧಿಕಾರಿ ಪ್ರಕಾಶ ಹುಣಸಗಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ತಾಲ್ಲೂಕು ಅಧ್ಯಕ್ಷ ವೀರಸ್ವಾಮಿ, ಬಾಬು ಜಗಜೀವನ ರಾಮ್ ಸಂಘದ ತಾಲ್ಲೂಕು ಅಧ್ಯಕ್ಷ ಮೆಶಕಂಕಾಳಿ, ಅಂಜುಮನ್ ಕಮಿಟಿ ಅಧ್ಯಕ್ಷ ಹೆಚ್‌ಎನ್.ಎಫ್ ಇಮಾಮ್ ನಿಯಾಜಿ, ತಾಯಪ್ಪ ನಾಯಕ, ಹೆಚ್.ವೆಂಕಟೇಶ, ಎನ್.ರಾಮಕೃಷ್ಣ, ವಿಜಯ ಕುಮಾರ, ದೇವದಾಸ, ಸಣ್ಣ ಮಾರೆಪ್ಪ, ಅಶ್ವನಿ ಕೊತಂಬ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here