ಈಜಲು ಹೋಗಿದ್ದ ವಿದ್ಯಾರ್ಥಿ ಸಾವು

0
163

ಬೆಂಗಳೂರು (ಕೃಷ್ಣರಾಜಪುರ):  ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಧಾರುಣ ಘಟನೆ ನಗರದ ಮಾರತ್‍ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪನಹಳ್ಳಿ ಕೆರೆಯಲ್ಲಿ ನಡೆದಿದೆ. ಸುನಿಲ್ (15) ಸಾವನ್ನಪ್ಪಿರುವ ವಿದ್ಯಾರ್ಥಿ. ಭಾನುವಾರವಾದ ಕಾರಣ ಸುನೀಲ್ ತಮ್ಮ ಸ್ನೇಹಿತರೊಂದಿಗೆ ಚಿನ್ನಪ್ಪನಹಳ್ಳಿ ಕೆರೆಗೆ ಈಜಲು ತೆರೆಳಿದ್ದ ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ಬಾಲಕನ ಮೃತದೇಹವನ್ನು ಹೊರತೆಗೆದಿರುವ ದಕ್ಷಿಣ ವಲಯ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಶವಪರಿಕ್ಷೆಗೆ ಒಳಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಾರತ್ತಹಳ್ಳಿ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

LEAVE A REPLY

Please enter your comment!
Please enter your name here