ಉಪ ಚುನಾವಣೆ ಫಲಿತಾಂಶವೇ ದಿಕ್ಸೂಚಿಯಲ್ಲ

0
171

ರಾಯಚೂರು: ರಾಜ್ಯದಲ್ಲಿ ನಡೆದ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಫಲಿತಾಂಶ ಮುಂದಿನ ವಿಧಾನ ಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿಯಲ್ಲ ಎಂದು ಸಂಸದ ಶ್ರೀರಾಮಲು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇದು ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ. ಮತಗಳ ಮಾತದಂಡದ ಮೇಲೆ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿಲ್ಲ, ಅಧಿಕಾರ, ಹಣದ ಮೇಲೆ ಜಯಗಳಿಸಿದೆ.
23 ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು,ಸಭೆಯಲ್ಲಿ ಉಪ ಚುನಾವಣೆ ಸೋಲಿನ ಕುರಿತು ಚರ್ಚಿಸಲಾಗುವುದು. ಉಪ ಚುನಾವಣೆಯಲ್ಲಿ ಸೋತ ಕಾರಣಕ್ಕೆ ಬಿಜೆಪಿ ಪಕ್ಷ ಮುಂದಿನ 2018 ರ ಚುನಾವಣೆಯಲ್ಲಿ ಪರಾಭವಗೊಳ್ಳಲಿದೆ ಎಂಬುವುದು ಸತ್ಯಕ್ಕೆ ದೂರವಾದುದು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಭಾರೀ ಬಹುಮತ ಗಳಿಸಲಿದೆ.
ಕಾಂಗ್ರೆಸ್ ಮುಖಂಡರು ಯಡಿಯೂರಪ್ಪ ಅವರ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಿ, ಉಪ ಚುನಾವಣೆ ಸೋಲಿಗೆ ಯಡಿಯೂರಪ್ಪ ಅವರೇ ಜವಾಬ್ದಾರರು ಎಂದು ಹೇಳುತ್ತಿರುವುದು ಸರಿಯಾದುದಲ್ಲ
ಇಲ್ಲಿ ಬಿಜೆಪಿಯ ಎಲ್ಲಾ ಕಾರ್ಯಕರ್ತರ ಜವಾಬ್ದಾರಿ ಇದೆ ಎಂದು ಹೇಳಿದರು. ರಾಜ್ಯ ಸರಕಾರ ಎಸ್ಸಿ, ಎಸ್ಟಿ, ಓಬಿಸಿ ವಸತಿ ನಿಲಯಗಳಿಗೆ ಸರಿಯಾದ ಆಹಾರ ಪೂರೈಕೆ ಮಾಡುತ್ತಿಲ್ಲ. ಇದನ್ನು ಪರಿಶೀಲಿಸಿ ಬಿಜೆಪಿ ಪಕ್ಷ ವರದಿ ಸಿದ್ಧಪಡಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಎನ್.ಶಂಕ್ರಪ್ಪ, ಮಾಜಿ ಜಿಲ್ಲಾಧ್ಯಕ್ಷ ಬಸವನಗೌಡ ಬ್ಯಾಗವಾಟ್, ಯುವ ಘಟಕಾಧ್ಯಕ್ಷ ದೊಡ್ಡ ಮಲ್ಲೇಶಪ್ಪ ಸೇರಿದಂತೆ ಅನೇಕರು ಇದ್ದರು.

LEAVE A REPLY

Please enter your comment!
Please enter your name here