ಋಣಮುಕ್ತ ಪತ್ರ ವಿತರಣೆ ಸಮಾರಂಭಕ್ಕೆ ಸಜ್ಜು.

0
94

17300 ಗ್ರಾಮಾಂತರ ರೈತ ಫಲಾನುಭವಿಗಳು- ಸಚಿವ ಕೃಷ್ಣ ಬೈರೇಗೌಡ.-ಎವಿಬಿ.

  • ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ:
    ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ರೈತರಿಗೆ ಋಣಮುಕ್ತ ಪತ್ರ ವಿತರಣೆಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ದೊಡ್ಡಬಳ್ಳಾಪುರ ನಗರಕ್ಕೆ ಶನಿವಾರ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರು ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತಾ ಕಾರ್ಯವನ್ನು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ದೇಶದ ಇತಿಹಾಸದಲ್ಲೇ ಭಾರಿ ಮೊತ್ತದ ರೈತರ ಸಾಲ ಮನ್ನಾ ಮಾಡಿದ ಹೆಗ್ಗಳಿಕೆಗೆ ನಮ್ಮ ಸಮ್ಮಿಶ್ರ ಸರ್ಕಾರ ಪಾತ್ರವಾಗಿದೆ. ಇದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಂದರಲ್ಲೇ ಸಹಕಾರಿ ಸಂಘಗಳಲ್ಲಿನ 17300 ರೈತರು ಮತ್ತು ಸಾವಿರಾರು ಖಾಸಗಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ್ದ ರೈತರು ಅನುಕೂಲ ಪಡೆದುಕೊಳ್ಳಲಿದ್ದಾರೆ. ಗಣಕೀಕೃತ ನೊಂದಣಿ ಮಾಡಿರುವ ಎಲ್ಲಾ ಫಲಾನುಭವಿಗಳು ಹಂತ ಹಂತವಾಗಿ ಇದರ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು….

ಬೈಟ್: ಕೃಷ್ಣಬೈರೇಗೌಡ- ಆರ್.ಡಿ.ಪಿ.ಆರ್ ಸಚಿವರು.

ಚಂದ್ರಶೇಖರ್.ಡಿ.ಉಪ್ಪಾರ್.
ದೊಡ್ಡಬಳ್ಳಾಪುರ.

LEAVE A REPLY

Please enter your comment!
Please enter your name here