ಒತ್ತುವರಿ ತೆರವು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ..

0
168

ಚಾಮರಾಜನಗರ/ಕೊಳ್ಳೇಗಾಲ:ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ಜಮೀನು ಹಾಗೂ ಕೆರೆಕಟ್ಟೆಗಳು ಒತ್ತುವರಿಯಾಗಿರುವುದನ್ನು ತೆರವು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕುಂತೂರು ಗ್ರಾಮಸ್ಥರು ತಾಲ್ಲೂಕು ಕಚೇರಿಯ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ನಂಜುಂಡಸ್ವಾಮಿ, ಕುಂತೂರು ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಸುತ್ತ ಮುತ್ತ ಅಕ್ರಮ ಮಂಜೂರಾತಿಯನ್ನು ರದ್ದು ಪಡಿಸಬೇಕು, ಕಾನೂನುಬಾಹಿರವಾಗಿ ಮಾಡಿಕೊಂಡಿರುವ ಜಮೀನಿನ ಒತ್ತುವರಿಯನ್ನು ತೆರವು ಮಾಡಬೇಕು ಹಾಗೂ ಜಿಲ್ಲಾಧಿಕಾರಿಗಳು 2014 ರಲ್ಲಿ ಮಾಡಿರುವ ಆದೇಶದಂತೆ ಕೆರೆಕಟ್ಟೆಗಳ ಒತ್ತುವರಿಯನ್ನು ಕೂಡಲೇ ತೆರವು ಮಾಡಿ ಜಮೀನನ್ನು ವಜಾಗೊಳಿಸುವವರೆವಿಗೂ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ನಾಡಗೌಡ ನಾಗರಾಜು, ಪ್ರಭುಸ್ವಾಮಿ, ಮಹಾದೇವಪ್ಪ, ವಿಷಕಂಠೇಗೌಡ, ಚಿನ್ನಸ್ವಾಮಿ, ಪುಟ್ಟಸ್ವಾಮಿ, ಕರಿನಂಜಶೆಟ್ಟಿ, ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here