ಕನ್ನಡ ಸಾಹಿತ್ಯ ಸಮ್ಮೇಳನ-ಮೆರವಣಿಗೆಗೆ ಚಾಲನೆ

0
178

ಬಳ್ಳಾರಿ /ಹೊಸಪೇಟೆ:ತಾಲೂಕಿನ ಕಮಲಾಪುರ ಪಟ್ಟಣದಲ್ಲಿಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಮಲಾಪುರ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾಗಿರುವ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ಮೆರವಣಿಗೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.

ಪಟ್ಟಣದ ಗಾರಿಬಾವಿ ಆಂಜನೇಯ ದೇವಸ್ಥಾನದಿಂದ ಆರಂಭವಾದ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ, ಸಮ್ಮೇಳನದ ಸರ್ವಾಧ್ಯಕ್ಷ ಮ.ಬ.ಸೋಮಣ್ಣ ರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಮ್ಮೇಳನ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಅಂತ್ಯಗೊಂಡಿತು.

ಮೆರವಣಿಗೆಯಲ್ಲಿ ಕುಂಭಹೊತ್ತ ಮಹಿಳೆಯರು, ಡೊಳ್ಳು,. ಕೋಲಾಟ ತಂಡಗಳು, ವಿವಿಧ ಜಾನಪದ ಕಲಾ ತಂಡಗಳು, ವಿವಿಧ ವೇಷಭೂಷಣ ತೊಟ್ಟ ಮಕ್ಕಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಗಮನ ಸೆಳೆದರು.

ಮೆರವಣಿಗೆಗೆ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ, ಮುನೀರ್ ಮೋಟಾರ್ಸ್ ನ ಶೋಯಬ್ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಮ.ಬ.ಸೋಮಣ್ಣ ರೊಂದಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಕಮಲಾಪುರ ಹೋಬಳಿ ಘಟಕದ ಅಧ್ಯಕ್ಷ ದಯಾನಂದ ಕಿನ್ನಾಳ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಾ.ಬಿ.ಆರ್.ಮಳಲಿ, ಉಪಾಧ್ಯಕ್ಷ ಕೊರವರ ಭೀಮಣ್ಣ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಗರದ ಗಣ್ಯರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here