ಕಸಾಪ ಸಮ್ಮೇಳನಕ್ಕೆ ಭರದ ಸಿದ್ದತೆ

0
167

ಬಳ್ಳಾರಿ /ಹೊಸಪೇಟೆ. ತಾಲೂಕಿನ ಕಮಲಾ ಪುರ ಪಟ್ಟಣದಲ್ಲಿ ನಾಳೆ ದಿ.19 ರಂದು ಜರುಗಲಿರುವ ಕಮಲಾಪುರ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ಗೋಡೆಗಳಲ್ಲಿ ಚಿತ್ರಗಳನ್ನು ಬಿಡಿಸುವ ಮೂಲಕ ಸಿಂಗರಿಸಲಾಗುತ್ತಿದೆ. ಇದರ ಜೊತೆಗೆ ಪದವಿಪೂರ್ವ ಕಾಲೇಜು ಆವರಣವನ್ನು ಜೆಸಿಬಿ ಯಿಂದ ಸಮತಟ್ಟು ಮಾಡಲಾಗುತ್ತಿದೆ. ಸಮಾರಂಭ ನಡೆಯುವ ಮುಖ್ಯ ವೇದಿಕೆಯಾದ ಅಮಾತ್ಯ ತಿಮ್ಮರಸ ವೇದಿಕೆ ಕಾರ್ಯ ಭರದಿಂದ ಸಾಗಿದೆ.
ಪಟ್ಟಣದಲ್ಲಿ ನಡೆಯುತ್ತಿರುವ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಕೋರುವ ಬ್ಯಾನರ್ ಗಳು, ಬಂಟಿಗ್ಸ್ ಗಳನ್ನು ಪಟ್ಟಣದ ಪ್ರಮುಖ ಬೀದಿಗಳು ಹಾಗೂ ವೃತ್ತಗಳಲ್ಲಿ ರಾರಾಜಿಸುತ್ತಿವೆ.
ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್, ನಾಳೆ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ರಂಗಕರ್ಮಿ ಮ.ಬ.ಸೋಮಣ್ಣ ವಹಿಸಲಿದ್ದಾರೆ.
ಸಮ್ಮೇಳನದ ಅಂಗವಾಗಿ ವಿಚಾರಗೋಷ್ಠಿ, ಕವಿಗೋಷ್ಠಿ, ಗಣ್ಯರಿಗೆ ಸನ್ಮಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

LEAVE A REPLY

Please enter your comment!
Please enter your name here