ಕಾಂಗ್ರೆಸ್ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲ

0
219

ಬಳ್ಳಾರಿ: ಕಾಂಗ್ರೆಸ್ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೆಎಂಎಫ್ ನ ಮಾಜಿ ರಾಜ್ಯಾದ್ಯಕ್ಷ ಜಿ.ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ.
ಬಳ್ಳಾರಿಯ ಮೋಕಾ ರಸ್ತೆಯ ಕೆಇಬಿ ಫಂಕ್ಷನ್ ಹಾಲ್ ನಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದ್ರು. ಬರಗಾಲದ ಬವಣೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ರೈತರಿಗೆ ಅನ್ಯಾಯ ಮಾಡಿದ ಸರ್ಕಾರದ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಮುಂದಿನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸಬೇಕು. ನೂರೈವತ್ತು ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಡುವಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಈಗಿನಿಂದಲೇ ಯೋಜನೆ ರೂಪಿಸಬೇಕೆಂದು ಸಲಹೆ ನೀಡಿದ್ರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರೈತ ಘಟಕದ ರಾಜ್ಯ ಉಪಾಧ್ಯಕ್ಷ ಎಸ್. ಗುರುಲಿಂಗನಗೌಡ, ಶಾಸಕ ಟಿಎಚ್ ಸುರೇಶ್ ಬಾಬು, ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಶಾಸಕರಾದ ಎಂಎಸ್ ಸೋಮಲಿಂಗಪ್ಪ, ನೇಮಿಚಂದ್ರ ನಾಯಕ್, ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವಗೌಡ ಮಾತನಾಡಿದ್ರು.
ಮಹಿಳಾ ಘಟಕದ ಅಧ್ಯಕ್ಷೆ ಕೆ.ಶಶಿಕಲಾ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here