ಕಾನೂನು ಅರಿವು ನೆರವು ಕಾರ್ಯಕ್ರಮ

0
226

ಚಿಕ್ಕಬಳ್ಳಾಪುರ/ಬಾಗೇಪಲ್ಲಿ : ಬಾಗೇಪಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಬಾಗೇಪಲ್ಲಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಕಾರ್ಯಕ್ರಮವನ್ನು ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮಾರ ಪಲ್ಲಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು .
ಈ ಕಾರ್ಯಕ್ರಮವನ್ನು ಮಾನ್ಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಅವರು ಉದ್ಘಾಟಿಸಿ ಮಾತನಾಡಿದರು ಮಕ್ಕಳು ಈ ದೇಶದ ಆಸ್ತಿ ಅವರು ಉತ್ತಮವಾದ ಪೌಷ್ಟಿಕ ಆಹಾರವನ್ನು ಸೇವಿಸಿ ಈ ದೇಶವನ್ನು ಕಟ್ಟುವಂತಹ ಪ್ರಜೆಗಳಾಗಬೇಕು. ಅಲ್ಲದೆ ಈ ದೇಶದ ಸಂವಿಧಾನದ ಚೌಕಟ್ಟಿನಲ್ಲಿ ಇರುವಂತಹ ಎಲ್ಲ ಕಾನೂನುಗಳನ್ನು ಪಾಲಿಸಬೇಕು ಎಂದು ತಿಳಿಸಿದರು . ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಅಧಿಕಾರಿ ರಾವ್ , ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ , ವಕೀಲರಾದ ನರೇಂದ್ರ ಬಾಬು, ಮಂಜುನಾಥ್, ನಾಗಭೂಷನ್, ಇತರ ಗ್ರಾಮದ ಮುಖಂಡರು ಹಾಜರಿದ್ದರು

LEAVE A REPLY

Please enter your comment!
Please enter your name here