ಕಾರ್ಮಿಕ ಫೆಡರೇಷನ್ ವತಿಯಿಂದ ಪ್ರತಿಭಟನೆ

0
244

ಮಂಡ್ಯ/ಮಳವಳ್ಳಿ: ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ನೀಡುಬೇಕು ಮತ್ತು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕ ರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕರ ನಿರೀಕ್ಷಕರ ಕಚೇರಿ ಮುಂದೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪುರಸಭೆ ಯಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ಬೀದಿಗಳಲ್ಲಿ ಘೋಷಣೆ ಮೂಲಕ ಕಚೇರಿ ಮುಂದೆ ಜಮಾಯಿಸಿದರು, ನಂತರ ಸಿಐಟಿಯು ಜಿಲ್ಲಾಧ್ಯಕ್ಷ ಜಿ ರಾಮಕೃಷ್ಣ ಮಾತನಾಡಿ, ಕಾರ್ಮಿಕರನ್ನು ಸಕಾ೯ರ ಗಳು ಕಡೆಗಣಿಸುತ್ತಿದೆ.ಕಾರ್ಮಿಕರಿಗಾಗಿ ನಿಗದಿಯಾದ ಹಣವನ್ನು ಹಂಚಲು ಮೀನಾವೇಷ ಎಣಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಪೆಡೆರೇಷನ್ ತಾಲ್ಲೂಕು ಅಧ್ಯಕ್ಷ ಕುಮಾರ್, ತಿಮ್ಮೇಗೌಡ,ಮಂಟೇಸ್ವಾಮಿ, ಸುನೀತಾ.ಮಂಜುಳ.ಗುರುಸ್ವಾಮಿ ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here