ಕಾಲುಬಾಯಿ ಲಸಿಕೆ ಕಾರ್ಯಕ್ರಮ..

0
137

ಮಂಡ್ಯ/ಮಳವಳ್ಳಿ: ಪಶುಸಂಗೋಪನಾ ಇಲಾಖೆ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ತಾಲ್ಲೂಕು ಮಟ್ಟದ 13 ನೇ ಕಾಲುಬಾಯಿ ಲಸಿಕೆ ಕಾರ್ಯಕ್ರಮ ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆಯಿತು . ಕಾರ್ಯಕ್ರಮ ದಲ್ಲಿ ಜಾನುವಾರುಗಳಿಗೆ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮ ವನ್ನು ಜಿ.ಪಂ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯ ಹನುಮಂತು ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ಪತ್ರಿಯೊಬ್ಬರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಕಾಯಿಲೆಯಿಂದ ತಪ್ಪಿಸಿ ಎಂದರು ಎಪಿಎಂಸಿ ಅಧ್ಯಕ್ಷ ಅಂಬರೀಶ್ ಮಾತನಾಡಿ, ಜಾನುವಾರು ಸಾಕುವ ಮೂಲಕ ಆರ್ಥಿಕವಾಗಿ ಮೇಲೆ ಬರುತ್ತಿರುವ ಸಂಧರ್ಭದಲ್ಲಿ ಅವುಗಳನ್ನು ಪೋಷಣೆ ಮಾಡಿಕೊಳ್ಳುವ ದೃಷ್ಟಿಯಿಂದ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯ ಶರತ್ , ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಪುಟ್ಟರಾಮು.ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದೇವರಾಜು , ಗ್ರಾ.ಪಂ ಅಧ್ಯಕ್ಷ ಬಸವರಾಜು, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಹಾಲುಉತ್ಪಾದಕರ ಸಹಕಾರ ಸಂಘ ಪಧಾಧಿಕಾರಿಗಳು ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here