ಕುಡಿಯುವ ನೀರಿಗಾಗಿ ಪ್ರತಿಭಟನೆ

0
215

ಬಳ್ಳಾರಿ /ಸಿರುಗುಪ್ಪ : ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ-ಹಳೇಕೋಟೆ ಗ್ರಾಮದಲ್ಲಿ ಪ್ರತಿಭಟನೆ-ಅಧಿಕಾರಿಗಳ ವಿರುದ್ಧ ಆಕ್ರೋಶ-ಸಮರ್ಪಕ ಕುಡಿಯುವ ನೀರಿಗೆ ಆಗ್ರಹ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಜಿಲ್ಲಾಡಳಿತ ಕೇವಲ ಬಾಯಿ ಮಾತಿನಲ್ಲಿ ಬರನಿರ್ವಹಣೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳುತ್ತಿದೆ. ಆದ್ರೆ ಜಿಲ್ಲೆಯಾದ್ಯಂತ ಜನ್ರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಸಿರುಗುಪ್ಪ ತಾಲೂಕಿನ ಹಳೇಕೊಟೆ-64 ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಿದ ಜನ್ರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಐದನೇ ವಾರ್ಡಿಗೆ ನೀರು ಪೂರೈಸಿದಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಹತ್ತು ಗಂಟೆಯಾದರೂ ಕಚೇರಿಗೆ ಪಿ.ಡಿ.ಒ. ಅಗಮಿಸಿರಲಿಲ್ಲ. ಸುದ್ದಿ ತಿಳಿದ ಇ.ಒ. ಭೇಟಿ ಮಾಡಿ ಪ್ರತಿಭಟನೆ ನಡೆಸುವರಿಗೆ ಸಮಜಾಯಿಷಿ ನೀಡಿದ್ರು. ಗ್ರಾ.ಪಂ. ಅಧ್ಯಕ್ಷರ ಕೈಗೊಂಬೆಯಂತೆ ವರ್ತಿಸುತ್ತಿರುವ ಪಿ.ಡಿ.ಒ. ಬಗ್ಗೆ ಜನ್ರು ಆರೋಪ ಮಾಡಿದ್ರು.

LEAVE A REPLY

Please enter your comment!
Please enter your name here