ಗೌರಿಲಂಕೇಶ್ ಹತ್ಯೆಗೆ ಉಜ್ಜಯಿನಿ ಜಗದ್ಗುರು ಸಂತಾಪ.

0
190

ಬಳ್ಳಾರಿ:ನಾಡಿನ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ತಮ್ಮ ನೇರ ನಡೆ ನುಡಿಯ ಮೂಲಕ ನಾಡಿನ ಹಲವು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ತಂದೆಯ ಹಾದಿಯಲ್ಲಿ ಮುಂದುವರೆದವರು.
ಸದಾ ಶಾಂತಿ ಸಂದೇಶಕ್ಕೆ ಬೆಂಬಲಿಸುತ್ತಿದ್ದ ಗೌರಿಯವರನ್ನು ಕೊಲೆ ಮಾಡಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆಯಾದಂತಾಗಿದೆ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಂತಕರನ್ನು ಪತ್ತೆ ಹಚ್ಚಿ,ಶಿಕ್ಷೆಗೆ ಒಳಪಡಿಸ ಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ. ಇದೇ ವೇಳೆ ಗೌರಿ ಆತ್ಮಕ್ಕೆ ಶಾಂತಿ ಕೋರಿದ ಶ್ರೀಗಳು ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here