ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘವತಿಯಿಂದ ಪ್ರತಿಭಟನೆ..

0
163

ಮಂಡ್ಯ/ಮಳವಳ್ಳಿ: ಖ್ಯಾತ ಸಾಹಿತಿ ಹಾಗೂ ಪತ್ರಕರ್ತೆ ಗೌರಿಲಂಕೇಶ್ ರವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಮಳವಳ್ಳಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿದ ಸಂಘಟನೆಗಳು ಕಪ್ಪು ಬಟ್ಟೆ ಧರಸಿ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಅನಂತರಾಂ ವೃತ್ತದಲ್ಲಿ ಕೆಲ ನಿಮಿಷ ರಸ್ತೆತಡೆ ನಡೆಸಿ ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ದಿನೇಶ್ ಚಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ ಮಾತನಾಡಿ . ಪತ್ರಕರ್ತರಿಗೆ ರಕ್ಷಣೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಗೌರಿಲಂಕೇಶ್ ಹತ್ಯೆಯೂ ಪ್ರಜಾಪ್ರಭುತ್ವದ ಹತ್ಯೆಯಾಗಿದೆ ಎಂದರು. ಪ್ರತಿಭಟನೆಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ. ನಾಗೇಶ. ಕಾರ್ಯದರ್ಶಿ ಉಮೇಶ್. ಸಹ ಕಾರ್ಯದರ್ಶಿ ನಾಗರಾಜು, ಮಾಜಿ ಅಧ್ಯಕ್ಷ ಪುಟ್ಟಸ್ವಾಮಾರಾಧ್ಯ. ಜಿಲ್ಲಾ ನಿರ್ದೇಶಕ ಮಾಗನೂರುಶಿವಕುಮಾರ್ ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here