ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

0
199

ಬಳ್ಳಾರಿ: ಇಂಧನ ಸಚಿವ ಡಿ ಕೆ ಶಿವಕುಮಾರ್ ಮತ್ತಿತರರ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ ಐಟಿ ದಾಳಿ ರಾಜಕೀಯ ಪ್ರೇರಿತವೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಯಲ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಅಮಿತ್ ಶಾ ಹಾಗೂ ಪ್ರಧಾನಿ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜೆ ಎಸ್ ಆಂಜನೇಯಲು ; ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರು ಗುಜರಾತ್ ನ ಶಾಸಕರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ ಅಲ್ಲದೆ ರಾಜ್ಯದಲ್ಲಿ ಮರಳಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿ ಕೆ ಶಿವಕಮಾರ್ ಶ್ರಮಿಸಲಿದ್ದಾರೆ, ಈ ಭಯದಿಂದ ಐಟಿ ದಾಳಿ ನಡೆದಿದೆ ಎಂದು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೇಯರ್ ವೆಂಕಟರಮಣ, ಮುಖಂಡರುಗಳಾದ ಅರುಣ್ ಕುಮಾರ್, ಮಹಿಳಾ ಘಟಕದ ಜಿಲ್ಲಧ್ಯಕ್ಷೆ ಟಿ ಪದ್ಮಾ, ವಿ ಕೆ ಬಸಪ್ಪ, ಬಿಎಂ ಪಾಟೀಲ್, ಕೆರಕೋಡೆಪ್ಪ, ಯತೀಂದ್ರ, ಸೂರಿ, ಕುಮಾರಸ್ವಾಮಿ ಹಾಗೂ ಇತರ ಪಾಲಿಕೆ ಸದಸ್ಯರು ಮತ್ತು ಮೊದಲಾದ ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here