ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

0
131

ರಾಯಚೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕ ದಿಂದ ಪ್ರತಿಭಟನೆ ಮಾಡಲಾಯಿತು.

ನಗರದ ಅಂಬೇಡ್ಕರ್ ವೃತ್ತದಬಳಿ ಯಿಂದ ಜಿಲ್ಲಾಧಿಕಾರಿ ಕಛೇರಿಯ ವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಿದರು.
ಯುವ ಅಧ್ಯಕ್ಷ ಪವನ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಬಿಜೆಪಿಯ ಜಗದೀಶ್ ಎನ್ನುವರು ದೇಶ ದ್ರೋಹಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಪ್ರಧಾನಿ ಯಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಇಂತವರ ಕುರಿತು ಮಾತನಾಡಿ ಜಗದೀಶ್ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ಯಲ್ಲಿ ಶಾಸಕ ಶಿವರಾಜ್ ಪಾಟೀಲ್. ರಾಜ್ಯ ಉಪಾಧ್ಯಕ್ಷ ಮಹಂತೇಶ ಪಾಟೀಲ್, ಜಿಲ್ಲಾದ್ಯಕ್ಷ ವಿರೂಪಾಕ್ಷಿ,ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here