ಟೆಂಟ್ ಹೌಸ್ ಗೆ ಆಕಸ್ಮಿಕ ಬೆಂಕಿ.

0
117

ಬೀದರ್/ಬಸವಕಲ್ಯಾಣ: ಟೆಂಟ್ ಹೌಸ್ ಒಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನಡೆದಿದೆ.ಎಪಿಎಂಸಿ ಕಚೇರಿ ಎದುರಿನಲ್ಲಿ ಇರುವ ಅಹಮದ್ ಪಾಷಾ ಎನ್ನುವವರಿಗೆ ಸೇರಿದ ಅಲಂಕಾರ ಟೆಂಟ್ ಹೌಸ್ ನಲ್ಲಿ ಬೆಂಕಿ ತಗುಲಿದ್ದು, ಟೆಂಟ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ಅಂಗಡಿಯಲ್ಲಿಯ ವಿಧ್ಯುತ್ ತಂತಿಯಿಂದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿತಗುಲಿದೆ ಎಂದು ಶಂಕಿಸಲಾಗಿದ್ದು, ಸುಮಾರು 5ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here