ತಾಲ್ಲೂಕು ಕಚೇರಿಗೆ ಮುತ್ತಿಗೆ,ಪ್ರತಿಭಟನೆ..

0
37

ಮಂಡ್ಯ/ಮಳವಳ್ಳಿ:ತಮಿಳುನಾಡು ತುತ್ತುಕುಡಿ ಗ್ರಾಮದಲ್ಲಿ ಅಮಾಯಕ ರೈತರ ಮೇಲೆ ಗೋಲಿಬಾರ್ ಮಾಡಿ 14 ಮಂದಿ ರೈತರ ಸಾವಿಗೆ ಕಾರಣರಾದ ತಮಿಳುನಾಡು ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ತಾಲ್ಲೂಕು ಕಚೇರಿಗೆ ಮುತ್ತಿಗೆ ಪ್ರತಿಭಟನೆ ನಡೆಸಲಾಯಿತು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸಿದ್ದೇಗೌಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂದೆ ತಮಿಳುನಾಡು ಸರ್ಕಾರ ವಿರುದ್ದ ಘೋಷಣೆ ಕೂಗಿದರು. ಇದೇ ಸಂದರ್ಭದಲ್ಲಿ ರೈತ ಸಂಘದ ಮಾಜಿ ಅಧ್ಯಕ್ಷ. ಶ್ರೀನಿವಾಸ್ ಮಾತನಾಡಿ ಸರ್ಕಾರ ಕೂಡಲೇ ಪ್ರಣಾಳಿಕೆಯಂತೆ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಶ್ರೀನಿವಾಸ್ , ಹೊಟ್ಟೆ ಮಾರಯ್ಯ, ಸಿದ್ದೇಗೌಡ ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here