ನಗರಸಭೆ ಆಡಳಿತದ ವಿರುದ್ಧ ಪ್ರತಿಭಟನೆ

0
182

ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ: ತಾಲೂಕು ಜಯಕರ್ನಾಟಕ ಸಂಘಟನೆ ವತಿಯಿಂದ ನಗರಸಭೆ ದುರಾಡಳಿತದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ತೆರಳಿದ ಪ್ರತಿಭಟನಾ ಮೆರವಣಿಗೆ ನಗರ ಸಭಾಕಾರ್ಯಾಲಯ ತಲುಪಿ ಕಚೇರಿಮುಂದೆ ಪ್ರತಿಭಟನೆ ನಡೆಸಿದರು. ನಗರದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ನಗರಸಭೆ ಸಂಪೂರ್ಣ ವಿಫಲ ವಾಗಿದೆ ಎಂದು ಆರೋಪಿಸಿ ನಗರಸಭೆ ಆಡಳಿತ ಮತ್ತು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ದಿನನಿತ್ಯ ಮುಂಜಾನೆ ನಗರವನ್ನು ಸ್ವಚ್ಚಗೊಳಿಸುತ್ತಿರುವ ಪೌರಕಾರ್ಮಿಕರಿಗೆ ಸಂಬಳ ನೀಡಲು ನಿರ್ಲಕ್ಷ ವಹಿಸುತ್ತಿರುವುದನ್ನು ಜಯ ಕರ್ನಾಟಕ ಸಂಘಟನೆ ತೀವ್ರವಾಗಿ ಖಂಡಿಸಿದರು. ಬಳಿಕ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಮುದ್ದಪ್ಪ ಮಳೆಯಿಂದಾಗಿ ಈ ರೀತಿ ಅವ್ಯವಸ್ಥೆ ಉಂಟಾಗಿದೆ. ನಗರದಾದ್ಯಂತ ಇಂದಿನಿಂದಲೇ ಸ್ವಚ್ಛತಾ ಕಾರ್ಯ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಬೈಟ್: ಮುದ್ದಪ್ಪ, ನಗರಸಭಾ ಅಧ್ಯಕ್ಷ

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ನಂಜಪ್ಪ, ತಾಲೂಕು ಕಾರ್ಯಾಧ್ಯಕ್ಷ ಉದಯ್ ಕುಮಾರ್, ಉಪಾಧ್ಯಕ್ಷರಾದ. ಸಂತೋಷ, ಶ್ರೀನಿವಾಸ್ , ನಗರ ಘಟಕ ಅಧ್ಯಕ್ಷ ಸತೀಶ್ ಭಾಗಿಯಾಗಿದ್ದರು.ನಗರ ಘಟಕ ಕಾರ್ಯಾಧ್ಯಕ್ಷ ಮೋಹನ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here