ನಗರಸಭೆ ಮುಂದೆ ಪ್ರತಿಭಟನೆ..

0
216

ಬಳ್ಳಾರಿ /ಹೊಸಪೇಟೆ:ನಗರದಲ್ಲಿ ಹೆಚ್ಚುತ್ತಿರುವ ಡೆಂಗ್ಯು, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳೀಯ ನಗರಸಭೆ ಕಛೇರಿ ಎದುರು  ಪ್ರತಿಭಟನೆ ನಡೆಸಿದರು.

ನಗರದಲ್ಲಿ ಡೆಂಗ್ಯು, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹಾವಳಿ ಅಧಿಕವಾಗಿದೆ. ಇದರಿಂದ ಜನರು ತತ್ತರಿಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ.

ಈ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಸ್ಲಂ ಪ್ರದೇಶಗಳಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿರುವ ಕರವೇ ಕಾರ್ಯಕರ್ತರು ಈ ಬಗ್ಗೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಹೋದರೆ, ಮುಂಬರುವ ದಿನಗಳಲ್ಲಿ ನಗರಸಭೆ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ನಂತರ ಬೇಡಿಕೆಗಳ ಮನವಿ ಪತ್ರವನ್ನು ನಗರಸಭೆ ಅಧ್ಯಕ್ಷರಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರವೇ ತಾಲೂಕು ಘಟಕದ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಎನ್,ಹೆಚ್.ಶ್ರೀನಿವಾಸ, ನಗರ ಘಟಕದ ಅಧ್ಯಕ್ಷ ಎಸ್.ಎಂ.ಜಾಫರ್, ಎಂ.ರಾಮಚಂದ್ರಪ್ಪ, ಬಾಬು, ಪಿ.ಡಿ.ಬಾಷ, ಅಮೀದುಲ್ಲಾ, ಅಬ್ದುಲ್ ರೆಹಮಾನ್, ಪಿ.ಅಮೀರ್ ಖಾನ್, ಕೆ.ಸುಮಾ, ಆರತಿ, ಗಂಗಮ್ಮ, ಸುವರ್ಣ, ಭುವನೇಶ್ವರಿ, ಪವಿತ್ರ, ಶಮಾ, ರತ್ನಮ್ಮ, ರಾಧಿಕಾ, ರೂಪಾ, ಶಕುಂತಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here