ನೀರಿನ ಬರಕ್ಕಿಂತ ಮಾನವೀಯತೆಯ ಬರ ತಾಂಡವಾಡುತ್ತಿದೆ

0
111

ಬಳ್ಳಾರಿ /ಹೊಸಪೇಟೆ:ನೀರಿನ ಬರಕ್ಕಿಂತ ಮಾನವೀಯತೆಯ ಬರ ತಾಂಡವಾಡುತ್ತಿದ್ದು, ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೇ ಅವರ ವಸ್ತುಗಳನ್ನು ಕಡಿಮೆ ಬೆಲೆಗೆ ಕೊಳ್ಳಲು ಹವಣಿಸುವುದೇ ಅಮಾನವೀಯ ಎನ್ನಿಸುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರದಿನೇಶ್ ಅಮೀನ ಮಟ್ಟು ಬೇಸರ ವ್ಯಕ್ತಪಡಿಸಿದರು.

ಕನ್ನಡ ವಿಶ್ವವಿದ್ಯಾಲಯದ ರಜತ ಮಹೋತ್ವವ ಅಂಗವಾಗಿ ಮಂಟಪ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕರ್ನಾಟಕದ ಜ್ವಲಂತ ಸಮಸ್ಯೆಗಳು: ನೀರು, ಬರ ನಿರ್ವಹಣೆ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀರು, ಬರ, ಕೃಷಿ ನಡುವೆ ಪರಸ್ಪರ ಸಂಬಂಧ ಇದೆ. ನೀರು, ಬರ ನಿರ್ವಹಣೆಯಲ್ಲಿ ಪ್ರಭುತ್ವದೊಂದಿಗೆ ನಾಗರೀಕರ ಪಾತ್ರವೂ ಇದೆ. ನಾವೆಲ್ಲ ಆತ್ಮ ವಂಚಕರಾಗಿದ್ದೇವೆ. ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ರೈತರಿಂದ ಕಡಿಮೆ ಬೆಲೆಗೆ ವಸ್ತುಗಳನ್ನು ಪಡೆಯಲು ಯೋಚಿಸುವುದೇ ಅಮಾನವೀಯ ಅನಿಸುತ್ತದೆ. ಪ್ರತಿ 2 ಗಂಟೆಗೊಮ್ಮೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ಥಳೀಯ ಲೇವಾದೇವಿಗಾರರ ಒತ್ತಡದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ವಿಷಯದಲ್ಲಿ ರಾಜಕೀಯ ಸಲ್ಲದು. ಸಮೀಕ್ಷೆ ಪ್ರಕಾರ ರೈತನ ಮಾಸಿಕ ಆದಾಯ 3,080 ರೂ. ಇದೆ. ಭೂ ಸ್ವಾದೀನ ತಡೆಯಲು ಸಾಧ್ಯವಾಗುತ್ತಿಲ್ಲ. ಭೂಸುಧಾರಣಾ ಕಾಯಿದೆ ರೈತರಿಗೆ ಅನುಕೂಲವಾಗಿಲ್ಲ. ರೈತರ ಸಾಲಮನ್ನಾ ಅನಿವಾರ್ಯವಾಗಿದ್ದು, ಸಾಲ ಮನ್ನಾ ರಾಜಕೀಯಕರಣಗೊಂಡಿದೆ ಎಂದರು.

ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಆರ್. ಚಂದ್ರಶೇಖರಯ್ಯಮಾತನಾಡಿ, ಬರ, ನೀರು, ನಿರ್ವಹಣೆ, ಜಾಗತಿಕ ಮಟ್ಟದ ಸಮಸ್ಯೆಯಾಗಿದ್ದರೂ ಎಲ್ಲರಿಗೂ ಸಮಸ್ಯೆ ತರುವುದಿಲ್ಲ. ವಾಣಿಜ್ಯ ಉದ್ಯಿಮೆಗಳು, ನೌಕರಶಾಹಿ, ರಾಜಕಾರಣಿಗಳು, ಬರದ ಲಾಭ ಪಡೆಯುತ್ತಿದ್ದಾರೆ. ರೈತರು, ವಿಕಲಚೇತನರು ಅಂಚಿನಲ್ಲಿರುವವರು ತೊಂದರೆ ಅನುಭವಿಸುವಂತಾಗಿದೆ ಎಂದರು.

ಪ್ರಾಧ್ಯಾಪಕ ಡಾ. ಸಿ.ಜಿ. ಲಕ್ಷ್ಮಿಪತಿ ಮಾತನಾಡಿ,ಸೈದ್ಧಾಂತಿಕ ವಿಚಾರಗಳಿಗೆ ನಡೆಯುವ ಕೊಲೆಗಳು, ನಿರಾಶ್ರಿತ ಮಹಿಳೆಯರ ಸಮಸ್ಯೆ, ಕಾಣೆಯಾಗುವ ಹಾಘೀ ಮಾರಾಟವಾಗುವ ಮಹಿಳೆಯರ ಸಮಸ್ಯೆ ಇವೆಲ್ಲ ನಾಗರಿಕ ಸಮಾಜದ ಜ್ವಲಂತ ಸಮಸ್ಯೆಗಳಾಗಿವೆ ಎಂದರು.

ಸಾಮಾಜಿಕ ಕಾರ್ಯಕರ್ತ ಜನಾರ್ದನ ಕೆಸರಗದ್ದೆ ಮಾತನಾಡಿ, 30 ವರ್ಷಗಳ ಹಿಂದೆ ನೀರಿನ ಸಮಸ್ಯೆ ಇರಲಿಲ್ಲ. ಇಂದು ನೀರಿನ ನಿರ್ವಹಣೆ ಮತ್ತು ಹಂಚಿಕೆ ಸಮರ್ಪಕವಾಗಿಲ್ಲ. ಜಲ ಸಂರಕ್ಷಣೆ, ಜಲ ಮರುಪೂರಣ, ಯಾವ ಕಾಲದಲ್ಲಿ ಎಂತಹ ಬೆಳೆ ಬೆಳೆಯಬೇಕು ಎಂಬ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದರು.

ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕುಲಸಚಿವ ಡಾ.ಡಿ. ಪಾಂಡುರಂಗಬಾಬುಉಪಸ್ಥಿತರಿದ್ದರು. ಡಾ.ವಿರೂಪಾಕ್ಷಿ ಪೂಜಾರಹಳ್ಳಿ ಸ್ವಾಗತಿಸಿದರು. ಡಾ.ರಮೇಶನಾಯಕ  ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಎಸ್.ವೈ. ಸೋಮಶೇಖರ ನಿರೂಪಿಸಿದರು. ಡಾ. ವಿಠ್ಠಲರಾವ್ ಟಿ. ಗಾಯಕ್ವಾಡ್ ವಂದಿಸಿದರು.

ನಂತರ ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಬಸವರಾಜ ಸಿಗ್ಗಾಂವ ಮತ್ತು ತಂಡದಿಂದ ತತ್ತ್ವಪದಗಳ ಹಾಡುಗಾರಿಕೆ ಜನಮನ ಸೊರೆಗೊಂಡಿತು.ಬೆಂಗಳೂರು ಏಷಿಯನ್ ಥಿಯೇಟರ್ ತಂಡ, ಅಭಿಯನಯಿಸಿದ ವರಾಹ ಪುರಾಣ ನಾಟಕ ಪ್ರೇಕ್ಷಕರ ಮನಗೆದ್ದಿತು.

LEAVE A REPLY

Please enter your comment!
Please enter your name here