ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ.

0
140

ಬಳ್ಳಾರಿ /ಹೊಸಪೇಟೆ:ರೈತರಿಗೆ ಮಿತ ನೀರು ಬಳಕೆ ಹಾಗೂ ಮಳೆ ನೀರು ಸಂಗ್ರಹ ಕುರಿತು ಜಾಗೃತಿ ಮೂಡಿಸಲು ಕೃಷಿ ಇಲಾಖೆಯು ಮೂರು ದಿನಗಳ ಕಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಕೃಷಿ ಅಧಿಕಾರಿ ಮಂಜುನಾಥ ಹೇಳಿದರು.

ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕೃಷಿ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ನೀರಿನ ಅಭಾವ ಎದುರಾಗಿದ್ದು, ರೈತರಿಗೆ ಮಳೆ ನೀರು ಸಂಗ್ರಹಣೆ ಮತ್ತು  ಮಿತ ನೀರು ಬಳಕೆ ಕುರಿತಂತೆ ಕೃಷಿ ವಿಚಾರಗಳನ್ನು  ಜಾಗೃತಿ ಮೂಡಿಸಲು ಮುಂದಾಗಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದ ಅವರು ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ರೈತರಿಗೆ ಬೇಕಾದ ಬಿತ್ತನೆ ಬೀಜಗಳು ಕೂಡ ಲಭ್ಯ ಇವೆ. ಹೋಬಳಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಸಮೀಪದ ಕೃಷಿ ಕೇಂದ್ರಕ್ಕೆ ತೆರಳಿ ಬೀಜಗಳನ್ನು ಪಡೆದುಕೊಳ್ಳಬಹುದು ಎಂದರು.

ತಾ.ಪಂ.ಅಧ್ಯಕ್ಷೆ ಜೋಗದ  ನೀಲಮ್ಮ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಭಾರಿ ತಾ.ಪಂ. ಕಾರ್ಯನಿರ್ವಹಕ ಅಧಿಕಾರಿ ರಾಜೇಂದ್ರ ಬಿಜೆಪಿ ಮುಖಂಡರಾದ ಧಮೇಂದ್ರ ಸಿಂಗ್ ಸಂದೀಪ್ ಸಿಂಗ್ ಸೇರಿದಂತೆ ಇತರರು ಇದ್ದರು

LEAVE A REPLY

Please enter your comment!
Please enter your name here