ಪಂಚಾಯ್ತಿ ಹಗರಣಗಳ ವಿರುದ್ಧ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

0
156

ಬೆಂಗಳೂರು/ಮಹದೇವಪುರ:- ಮಂಡೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ನೀಡಿದ್ದ ದೂರಿನನ್ವಯ ತನಿಖೆ ನಡೆದಿದ್ದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯಧರ್ಶಿ ಪಿಡಿಒ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದ್ದು ಇನ್ನು ಜಾರಿಯಾಗದ ಕಾರಣ ಬಿಜೆಪಿ ಕಾರ್ಯಕರ್ತರು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜ್ಯೋತಿಪುರ ವೇಣು ಮಂಡೂರು ಗ್ರಾಮ ಪಂಚಾಯಿತಿಯಲ್ಲಿ ಕೋಟಿಗಟ್ಟಲೆ ಹಗರಣ ನಡೆದಿದೆ. ಅಕ್ರಮ ಖಾತೆಗಳು ತೆರಿಗೆ ವಸೂಲಿ ಸೇರಿದಂತೆ ಹಲವು ವಿಚಾರಗಳಲ್ಲಿ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ಶಾಮೀಲಾಗಿರುವುದು ತನಿಖೆಯಿಂದ ದೃಢಪಟ್ಟಿದೆ ಹಾಗಾಗಿ ಪಂಚಾಯತ್ ರಾಜ್ ಇಲಾಖೆಯು ಸಹ ಸೂಕ್ತ ಕ್ರಮಕ್ಕೆ ಮುಂದಾಗಿದ್ದು ಆದಷ್ಟು ಬೇಗನೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸ ಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ಗೌಡ, ಕೆಂಪೇ ಗೌಡ, ತಮ್ಮಣ್ಣ, ಮುನಿರಾಜು, ಶಿವ ಕುಮಾರ್, ನಟರಾಜ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here