ಪಕೋಡ ಮಾಡಿ,ಮೋದಿ ವಿರುದ್ಧ ಪ್ರತಿಭಟನೆ

0
107

ಬೆಂಗಳೂರು ಗ್ರಾಮಾಂತರ/ ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಎನ್‌.ಎಸ್.ಯು‌.ಐ ಕಾರ್ಯಕರ್ತರು ಪಕೋಡ ಮಾಡುವುದರೊಂದಿಗೆ ಪ್ರತಿಭಟನೆ ನಡೆಸಿದರು.

ಪಕೋಡ ವೃತ್ತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಯೂತ್ ಕಾಂಗ್ರೆಸ್ ನ ಪುನೀತ್,ಕೇಂದ್ರ ಸರ್ಕಾರ ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ. ಕೋಟಿ ಕೋಟಿ ಉದ್ಯೋಗ ಸೃಷ್ಠಿಸುತ್ತೇವೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಾ, ಅಧಿಕಾರದ ಗದ್ದುಗೆ ಏರಿದ ಬಿಜೆಪಿ ದೇಶದ ಅರ್ಥ ವ್ಯವಸ್ಥೆಯನ್ನು ಸಂಪೂರ್ಣ ಅಧೋಗತಿಗೆ ತಳ್ಳಿತ್ತಿದ್ದಾರೆ. ಪದವಿಗಳನ್ನು ಪೂರೈಸಿಕೊಂಡಿರುವ ಯುವಕರು ಉನ್ನತ ಉದ್ಯೋಗಕ್ಕಾಗಿ ಕಾಯುತ್ತಿದ್ದರೆ, ಪ್ರಧಾನಿಗಳು ಪಕೋಡ ಮಾರಾಟ ಮಾಡಿ ಎಂದು ಹೇಳುವ ಮೂಲಕ ನಿರ್ಲಕ್ಷ್ಯದ ಹೇಳಿಕೆಗಳನ್ನು ನೀಡಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ  ಎನ್‌.ಎಸ್.ಯು‌.ಐ ಅಧ್ಯಕ್ಷ ಸುಧಾಕರ್, ಉಪಾಧ್ಯಕ್ಷ ಅಶ್ವತ್ಥರೆಡ್ಡಿ,   ಎನ್.ಎಸ್.ಯು.ಐ ಉಪಾಧ್ಯಕ್ಷ ಗೋಪಾಲ ಕೃಷ್ಣ.ಸಿ.ಎಂ, ಯೂಥ್ ಕಾಂಗ್ರೆಸ್ ಅಧ್ಯಕ್ಷ ಜವಾಜರಾಜೇಶ್, ಮನು, ನವೀನ್,  ಪ್ರ.ಕಾರ್ಯದರ್ಶಿ ಶಿವರಾಜ್ ಜಯಸಿಂಹ, ನಗರ ಒಬಿಸಿ ಅಧ್ಯಕ್ಷ ಪು.ಮಹೇಶ್, ಕಸಾಬ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಯೂಥ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ, ಸಾಮಾಜಿಕ ಜಾಲತಾಣ ಸಂಚಾಲಕರು ಕಿರಣ್ ವಿ.ಗೌಡ  ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here