ಪರಿವರ್ತನಾ ಯಾತ್ರೆ ಕಾರ್ಯಕ್ರಮ..

0
229

ಮಂಡ್ಯ/ಮಳವಳ್ಳಿ:ಸಿದ್ದರಾಮಯ್ಯ ಸರ್ಕಾರದ ಬಗ್ಗೆ ರಾಜ್ಯ ಜನತೆಗೆ ಬೇಸರ ತಂದಿದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.ಮಳವಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜು ಆವರಣದಲ್ಲಿ ನಡೆದ ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯವನ್ನು ಶಮನಗೊಳಿಸಲು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿ ಕೊಂಡರು. ಇದೇ ಸಂದರ್ಭದಲ್ಲಿ ಶೋಭ ಕರಂದ್ಲಾಜೆ ಮಾತನಾಡಿ . ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು. ತಾಲ್ಲೂಕು ಕಚೇರಿ . ಕೆಇಬಿ ಯಲ್ಲೂ ಲಂಚ ತಾಂಡವವಾಡುತ್ತಿದೆ ಎಂದು ಆರೋಪಿಸಿದರು. ಇದಲ್ಲದೆ ಈಗಿನ ಶಾಸಕ ನರೇಂದ್ರ ಸ್ವಾಮಿ ರವರು ಮರುಳು ದಂದೆ ನಡೆಸುತ್ತಿದ್ದಾರೆ. ಎಂದು ಆರೋಪಿಸಿದರು.ಕಾರ್ಯಕ್ರಮ ದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಆರ್.ಆಶೋಕ, ಮಾಜಿ ಸಚಿವ ರೇಣುಕಾಚಾರ್ಯ, ನೆ.ಲ ನರೇಂದ್ರಬಾಬು, ಮಾಜಿ ಸಚಿವ ಬಿ ಸೋಮಶೇಖರ್, . ತಾಲ್ಲೂಕು ಅಧ್ಯಕ್ಷ ಶಿವಸ್ವಾಮಿ, ದೋರನಹಳ್ಳಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಡಾ.ಶ್ರೀಧರ್, ರಾಜು. ಕೃಷ್ಣ ಸೇರಿದಂತೆ ಮತ್ತಿತ್ತಿರರು ಇದ್ದರು

LEAVE A REPLY

Please enter your comment!
Please enter your name here