“ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರು ಕೈ ಜೋಡಿಸಿ

0
192

ಬೆಂಗಳೂರು ಗ್ರಾಮಾಂತರ/ದೊಡ್ದಬಳ್ಳಾಪುರ: ತಾಲ್ಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಏಕೋ ಗ್ರೀನ್ ಸಲ್ಯೂಶನ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಉಪಯೋಗದಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮದ ಕುರಿತು ಜನರಲ್ಲಿ ಅರಿವು ಮೂಡಿಸಲು ಸಾಮೂಹಿಕ ಜಾಥಾವನ್ನು ಏರ್ಪಡಿಸಲಾಗಿತ್ತು ಮತ್ತು ಸಮೀಪದ ವರದನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪರಿಸರ ಮಾಲಿನ್ಯ ನಿಯಂತ್ರಣ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು, ಕಾರ್ಮಿಕರು, ಶಾಲೆಯ ಉಪಾಧ್ಯಾಯ ವರ್ಗ, ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಜರಾಗಿದ್ದರು.

LEAVE A REPLY

Please enter your comment!
Please enter your name here