ಪರಿಹಾರಕ್ಕಾಗಿ ಪ್ರತಿಭಟನೆ

0
99

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಅಳವಡಿಸುತ್ತಿರುವ ಪವರ್ ಗ್ರಿಡ್ ಅಳವಡಿಸಲು ಉದ್ದೇಶಿಸಿರುವ ರೈತರ ಜಮೀನಿಗೆ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವುದನ್ನು ಖಂಡಿಸಿ ಗುಡಿಬಂಡೆ ತಾಲ್ಲೂಕು ಕಛೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪುಟ್ಟಣ್ಣಯ್ಯ ಬಣದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕೆಪಿಆರ್‌ಎಸ್ ತಾಲ್ಲೂಕು ಕಾರ್ಯದರ್ಶಿ ಹೆಚ್.ಪಿ.ಲಕ್ಷ್ಮೀನಾರಾಯಣ ದೇಶದ ಆರ್ಥಿಕತೆಗೆ ಬೆನ್ನೆಲುಬು ರೈತನಾಗಿದ್ದು, ಇಡೀ ದೇಶಕ್ಕೆ ಅನ್ನ ನೀಡುವ ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ. ಗೌರಿಬಿದನೂರಿನಲ್ಲಿ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ ಪವರ್ ಗ್ರಿಡ್ ಗಳ ನಿರ್ಮಾಣಕ್ಕೆ ಉದ್ದೇಶಿಸಿರುವ ರೈತರ ಜಮೀನಿಗೆ ಸೂಕ್ತ ಪರಿಹಾರ ನೀಡದೇ ಅವರನ್ನು ವಂಚಿಸುತ್ತಿದೆ. ರೈತರಿಗೆ ನ್ಯಾಯ ದೊರಕಿಸಿಕೊಡಬೇಕಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಒಂದು ಬಾರಿ ಕನಿಷ್ಟ ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತದೆ ಆದರೆ ರೈತನ ಕುಟುಂಬ ಜೀವನ ಪರ್ಯಂತ ಜೀವನ ನಡೆಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕು. ಆದ್ದರಿಂದ ರೈತರ ಜಮೀನಿಗೆ ಸೂಕ್ತ ಪರಿಹಾರ ನೀಡಬೇಕು ಇಲ್ಲವಾದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟವನ್ನು ಕೆಪಿಆರ್‌ಎಸ್ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂತರ ಕೆಪಿಆರ್‌ಎಸ್ ಹಾಗೂ ರೈತ ಸಂಘದ ವತಿಯಿಂದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ವೇಳೆ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ , ಮುಖಂಡರುಗಳಾದ ಗೋವಿಂದಪ್ಪ, ನಂಜುಂಡಪ್ಪ, ಕೆಪಿಆರ್‌ಎಸ್ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ವೆಂಕಟರಾಜು, ನಾರಾಯಣಪ್ಪ, ನಾಗರಾಜು, ಶಿವಪ್ಪ, ರವಿಂದ್ರ ರೆಡ್ಡಿ, ಮಧು, ರಮಣ, ಶ್ರೀನಿವಾಸ, ಕೊಂಡಪ್ಪ, ರಹಮತುಲ್ಲಾ, ರೈತ ಮುಖಂಡರಾದ ವರದರಾಜು, ಗಂಗಾಧರಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.

ವರದಿ –
ಬಾಲಾಜಿ
ಗುಡಿಬಂಡೆ

LEAVE A REPLY

Please enter your comment!
Please enter your name here