ಪೌರಾಯುಕ್ತರ ದಾಳಿ….

0
339

ಚಿಕ್ಕಬಳ್ಳಾಪುರ/ಚಿಂತಾಮಣಿ:ನಗರದಲ್ಲಿ ಅಂಗಡಿಗಳ ಮೇಲೆ ಪೌರಾಯುಕ್ತ ಪ್ರಸಾದ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು. ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮುಂದುವರೆಸಿದರೇ ದಂಡ ವಿದಿಸುವುದರೊಂದಿಗೆ ಕಾನೂನು ಕ್ರಮ ಜರಿಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ‌. ದಯವಿಟ್ಟು ಹಪ್ಲಾಸ್ಟಿಕ್ ಮುಕ್ತ ಚಿಂತಾಮಣಿ ನಗರವನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದು ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಬಳಿಕ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಪಣತೊಟ್ಟಿದ್ದು ಇದಕ್ಕೆ ವರ್ತಕರು ಹಾಗೂ ಸಾರ್ವಜನಿಕರು ಆಡಳಿತದ ಜೊತೆ ಕೈಜೋಡಿಸಬೇಕು ಎಂದು ಕೋರಿದರು.ಚಿಂತಾಮಣಿಯನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ನಗರಸಭೆಯಿಂದ ವಿಶೇಷ ತಂಡಗಳನ್ನು ರಚನೆ ಮಾಡುವುದು.ಈ ತಂಡಗಳು ಅಂಗಡಿ ಹಾಗೂ ಹೋಟೆಲ್ ಮೇಲೆ ದಾಳಿ ಮಾಡುತ್ತವೆ.ಈ ವೇಳೆ ಪ್ಲಾಸ್ಟಿಕ್ ಕಾಣಿಸಿಕೊಂಡರೆ ದಂಡದ ಜೊತೆಗೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಹೆಚ್ಚು ಪ್ಲಾಸ್ಟಿಕ್ ಬಳಸಲಾಗುತ್ತಿದ್ದು ಇದರಿಂದ ತ್ಯಾಜ್ಯ ಹೆಚ್ಚಾಗುವುದರ ಜೊತೆಗೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಪ್ಲಾಸ್ಟಿಕ್ ಬಳಕೆ ಕಾನೂನು ಬಾಹಿರವಾಗಿದ್ದು ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ತಿಂಡಿ ಊಟ ಪಾರ್ಸಲ್ ಮಾಡುವುದು ಹಾಗೂ ಪ್ಲೇಟ್ ಮೇಲೆ ಪ್ಲಾಸ್ಟಿಕ್ ಕವರ್ ಬಳಸುವುದು ಆರೋಗ್ಯಕ್ಕೆ ಹಾನಿಕರ ಬಿಸಿ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್ ಪೇಪರ್ ಮೇಲೆ ಹಾಕಿದರೆ ರಾಸಾಯನಿಕ ಅಂಶಗಳು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದ್ದರಿಂದ ಹೋಟೆಲ್ ಮತ್ತು ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ನಗರಸಭೆ ಪರಿಸರ ಅಧ್ಯಯನ ಉಮಾ ಶಂಕರ್, ಕಂದಾಯಾಧಿಕಾರಿ ಸುಬ್ರಮಣ್ಯ, ಆರೋಗ್ಯ ಅಧಿಕಾರಿ ಬಾಬು ಹಾಗೂ ನಗರಸಭಾ ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here