ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

0
68

ಚಿಕ್ಕಬಳ್ಳಾಪುರ/ ಚಿಂತಾಮಣಿ: ನಗರಸಭೆಯ ಸಭಾಂಗಣದಲ್ಲಿ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣ ಶಿಬಿರವನ್ನು ಹಮ್ಮಿ ಕೊಳ್ಳಲಾಗಿತ್ತು .

ಶಿಬಿರದಲ್ಲಿ ನೂರುಕ್ಕಿಂತ ಹೆಚ್ಚು ಪೌರ ಕಾರ್ಮಿಕರು ಶಿಬಿರವನ್ನು ಸದುಪಯೋಗ ಪಡೆದುಕೊಂಡರು .

ಈ ಸಂದರ್ಭದಲ್ಲಿ ಆರೋಗ್ಯ ಶಾಖೆ ಅಧಿಕಾರಿ ಆರತಿ ವರದಿಗಾರರ ಜೊತೆ ಮಾತನಾಡಿ ಪ್ರತಿ ಮೂರು ತಿಂಗಳಿಗೊಮ್ಮೆ ನಗರಸಭೆಯ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ .

ಇಂತಹ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಪೌರಕಾರ್ಮಿಕರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಜಾತ ಶಿವಣ್ಣ, ಆರೋಗ್ಯ ಶಾಖೆ ಆರತಿ, ಶೋಭ ,ಪ್ರತಿಭಾ ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here