ಪ್ರವಾಸೋದ್ಯಮ ಅಭಿವೃದ್ದಿಗಾಗಿ ಒಂದು ಕೋಟಿ

0
156

ಚಿಕ್ಕಬಳ್ಳಾಪುರ/ಗುಡಿಬಂಡೆ: ತಾಲ್ಲೂಕಿನ ಐತಿಹಾಸಿಕ ಸ್ಥಳಗಳಾದ ಸುರಸದ್ಮಗಿರಿ ಬೆಟ್ಟ ಹಾಗೂ ಅಮಾನಿ ಬೈರಸಾಗರ ಕೆರೆಯನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡಲು ಸುಮಾರು ಒಂದುಕೋಟಿ ಬಿಡುಗಡೆಯಾಗಿರುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ಸುರಸದ್ಮಗಿರಿ ಬೆಟ್ಟಕ್ಕೆ ಮೆಟ್ಟಿಲುಗಳನ್ನು ಹತ್ತುವಾಗ ಮೇಲ್ಚಾವಣಿ ಸೇರಿದಂತೆ ಸುಮಾರು ೫೦ ಲಕ್ಷದ ಕಾಮಗಾರಿ, ಪಟ್ಟಣದ ಹೊರವಲಯದಲ್ಲಿರುವ ಅಮಾನಿ ಬೈರಸಾಗರ ಕೆರೆಯಲ್ಲಿ ಬೋಟಿಂಗ್ ಕಾಮಗಾರಿಗೆ ೫೦ ಲಕ್ಷ ಹಾಗೂ ಎಲ್ಲೋಡು ಬಳಿಯಿರುವ ಆದಿನಾರಾಯಣ ಸ್ವಾಮಿ ಬೆಟ್ಟದ ಬಳಿಯ ಪಾರ್ಕ್ ೨೫ ಲಕ್ಷ ಕಾಮಗಾರಿಗಳಿಗೆ ಶೀಘ್ರವಾಗಿ ಚಾಲನೆ ನೀಡಲಾಗುವುದು ಮುಂದಿನ ದಿನಗಳಲ್ಲಿ ಗುಡಿಬಂಡೆಯನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡಲು ಇನ್ನೂ ಹೆಚ್ಚಿನ ಅನುದಾನ ತರಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ.ಪಂ. ಅಧ್ಯಕ್ಷ ಚಂದ್ರಶೇಖರ ನಾಯ್ಡು, ಸದಸ್ಯೆ ಲಕ್ಷ್ಮೀಕಾಂತಮ್ಮ, ರಿಯಾಜ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ತುಳಸಿ, ಮುಖಂಡರಾದ ಚಾಂದ್‌ಪಾಷ, ಪಾವಜೇನಹಳ್ಳಿ ನಾಗರಾಜರೆಡ್ಡಿ, ಅನಂತಕುಮಾರ್ ಸೇರಿದಂತೆ ಹಲವರು ಇದ್ದರು.

 

LEAVE A REPLY

Please enter your comment!
Please enter your name here