ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ..

0
164

ಬಳ್ಳಾರಿ:ಪೊಲೀಸ್ ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ಪ್ರಾಮಾಣಿಕ, ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸುವ ಜೊತೆಗೆ ಜಾತಿ, ಮತ, ಪಂಥ ಎಲ್ಲವನ್ನೂ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಎಸ್.ಮುರುಗನ್ ಅವರು ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 2ನೇ ತಂಡದ ಸಶಸ್ತ್ರ ಮೀಸಲು ಪಡೆ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪ್ರಶಿಕ್ಷಣಾರ್ಥಿಗಳ ಗೌರವ ವಂದನೆ ಸ್ವೀಕರಿಸಿ, ಆಕರ್ಷಕ ಕವಾಯತು ವೀಕ್ಷಿಸಿ ಮಾತನಾಡಿದ ಅವರು ಶಿಸ್ತನ್ನು ಇಲಾಖೆಯಲ್ಲಿ ಮಾತ್ರವಲ್ಲದೆ ತಮ್ಮ ವ್ಯಕ್ತಿಕ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಪ್ರತಿಜ್ಞಾ ವಿಧಿ ಕೇವಲ ಬಾಯಿ ಮಾತಿಗಲ್ಲದೆ ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡು ಕಾರ್ಯ ನಿರ್ವಹಿಸಿಬೇಕು. ಯಾವುದೇ ಕೋಮು, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿಬೇಕು ಎಂದು ಹೇಳಿದರು.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಿಸಿಲು ನಾಡಿಗೆ ಬಂದು ತರಬೇತಿ ಪಡೆದಿರುವ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿ ಜೀವನ ಸುಖಕರವಾಗಿರಲೆಂದು ಶುಭ ಕೋರಿ ವಿವಿಧ ವಿಭಾಗದಲ್ಲಿ ಗೆದ್ದ ಸ್ಪರ್ಧಾರ್ಥಿಗಳಿಗೆ ಬಹುಮಾನ ವಿತರಿಸಿದರು.
ನಿವೃತ್ತ ದೈಹಿಕ ಶಿಕ್ಷಕ ಡಿ.ಸುಬ್ಬಣ್ಣ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಆರ್.ಚೇತನ್, ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎಲ್.ಝಂಡೇಕರ್, ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳ ಪೋಷಕರು ಸೇರಿದಂತೆ ಮತ್ತಿತರರು ಇದ್ದರು

LEAVE A REPLY

Please enter your comment!
Please enter your name here