ಬಯಲು ಬಹಿರ್ದೆಸೆ ಮುಕ್ತ ತಾಲೂಕನ್ನಾಗಿ ಮಾಡಲು ಕರೆ..

0
275

ಬಳ್ಳಾರಿ /ಹೊಸಪೇಟೆ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತ ತಾಲೂಕನ್ನಾಗಿ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ ಕರೆ ನೀಡಿದರು.

ಸ್ಥಳೀಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸ್ವಚ್ಛ ಭಾರತ ಯೋಜನೆಯ ಜಾಗೃತಿಗಾಗಿ ಸ್ವಚ್ಛ ಸಂಕಲ್ಪದ ಮೂಲಕ ಸ್ವಚ್ಛ ಸಿದ್ದಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಟೋಬರ್ 2, 2017 ರೊಳಗೆ ಹೊಸಪೇಟೆ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತ ತಾಲೂಕನ್ನಾಗಿ ಮಾಡುವ ಸಂಕಲ್ಪದೊಂದಿಗೆ ಅಧಿಕಾರಿಗಳು ಕಾರ್ಯೊನ್ಮುಖವಾಗಬೇಕು. ಅದಕ್ಕಾಗಿ ಸೆ.3 ರಿಂದ ಸೆ.8 ರ ವರೆಗೆ ಸ್ವಚ್ಛ ಸಂಕಲ್ಪದ ಮೂಲಕ ಸಿದ್ದಿ ಕಾರ್ಯಕ್ರಮಗಳನ್ನು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾರ್ಯಗಳನ್ನು ಕೈಗೊಳ್ಳುವಂತೆ, ಚರಂಡಿಗಳನ್ನು ಸ್ವಚ್ಛ ಮಾಡಿ ಫಾಗಿಂಗ್ ಮಾಡುವಂತೆ, ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕರೆ ನೀಡಿದರು.
ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ತಮ್ಮ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಚ್ಛತಾ ಕುರಿತ ಕರಪತ್ರಗಳನ್ನು ಹಂಚುವಂತೆ, ಶಾಲಾ ಶಿಕ್ಷಕರು, ಸಂಘ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಅಲ್ಲದೆ ಕೈಗೊಂಡ ಕ್ರಮಗಳ ಕುರಿತು ತಾಲೂಕು ಪಂಚಾಯಿತಿಗೆ ವರದಿ ನೀಡುವಂತೆ ಈ ಮೂಲಕ ಸ್ವಚ್ಛ ಭಾರತ್ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ತಾ.ಪಂ.ಲೆಕ್ಕಾಧಿಕಾರಿ ಶಿವರಾಯ ಕಾಚಾಪುರ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಶ್ರೀಕುಮಾರ್ ಸೇರಿದಂತೆ ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ನೋಡೆಲ್ ಅಧಿಕಾರಿಗಳು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here