ಬಯಲು ಮುಕ್ತ ಶೌಚ ಕ್ಷೇತ್ರವನ್ನಾಗಿ ಮಾಡಲು ಶಾಸಕ ಕರೆ.

0
146

ಬಳ್ಳಾರಿ/ಹೊಸಪೇಟೆ. ಪ್ರತಿಯೊಬ್ಬರು ಶೌಚಾಲಯ ಬಳಸುವ ಮೂಲಕ ವಿಜಯನಗರ ವಿಧಾನಸಭಾ ಕ್ಷೇತ್ರವನ್ನು ಬಯಲು ಶೌಚ ಮುಕ್ತ ಕ್ಷೇತ್ರವನ್ನಾಗಿ ಮಾಡುವಂತೆ ಶಾಸಕ ಆನಂದ್ ಸಿಂಗ್ ಕರೆ ನೀಡಿದರು.ನಗರದ 35ನೇ ವಾರ್ಡಿನಲ್ಲಿ 2016-17ನೇ ಸಾಲಿನ ಗಿರಿಜನ ಉಪಯೋಜನೆ ಅಡಿಯಲ್ಲಿ, 15 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿದ ಸಾಮೂಹಿಕ ಶೌಚಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಶೌಚಾಲಯ ಬಳಸುವುದರಿಂದ ಸಾಂಕ್ರಾಮಿಕ ರೋಗಗಳಿಂದ ದೂರವಿರುವುದರ ಜೊತೆಗೆ ಉತ್ತಮ ಪರಿಸರವನ್ನು ಕಾಪಾಡಬಹುದಾಗಿದೆ. ಸ್ವಚ್ಛತೆ ಇಲ್ಲದೆ ಇದ್ದರೆ ರೋಗಗಳು ಹರಡುವ ಸಾಧ್ಯತೆ ಹೆಚ್ಚು. ಇದು ಯಾರೋ ಹೇಳುತ್ತಾರೆಂದು ಮಾಡುವ ಕೆಲಸವಲ್ಲ. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಮಾಡಬೇಕು ಎಂದರು.ಈ ಸಂದರ್ಭದಲ್ಲಿ 35ನೇ ವಾರ್ಡಿನ ನಗರಸಭೆ ಸದಸ್ಯ ಗುಡಗುಂಟಿ ಮಲ್ಲಿಕಾರ್ಜುನ, ‌ಮುಖಂಡರಾದ ಬಿ.ಎಸ್.ಜಂಬಯ್ಯ ನಾಯಕ, ಕಣ್ಣಿ ಶ್ರೀಕಂಠ, ಧರ್ಮೇಂದ್ರ ಸಿಂಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here