ಬರ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

0
63

ಚಿಕ್ಕಬಳ್ಳಾಪುರ /ಚಿಂತಾಮಣಿ :ತಾಲ್ಲೂಕಿನ ಮೈಲಾಂಡಹಳ್ಳಿ ಇಂದು ಮಧ್ಯಾಹ್ನ ಆಗಮಿಸಿರುವ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥರು ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗದ ಜಂಟಿ ಸಲಹೆಗಾರರಾದ ಮಾನಸ ಚೌದರಿ, ಇವರ ನೇತೃತ್ವದ ಬರ ಅಧ್ಯಯನ ತಂಡದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬೆಂಗಳೂರು ಡಿಜಿಎಂ ಸತ್ಯಕುಮಾರ್, ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆಯ ಜಂಟಿ ನಿರ್ದೇಶಕರಾದ ಸುಭಾಶ್ ಚಂದ್ರ ಮೀನಾ, ಕೇಂದ್ರ ಸರ್ಕಾರದ ಎನ್.ಎಂ.ಎಫ್.ಸಿಯ ಸಹಾಯಕ ನಿರ್ದೇಶಕಿ ಡಾ.ಶಾಲಿನಿ ಸಕ್ಸೇನಾ ತಂಡವು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೊಸಹಳ್ಳಿಗೆ ಭೇಟಿ ನೀಡಿ ನೀರು ಸರಬರಾಜು ಮಾಡುವುದನ್ನು ವೀಕ್ಷಿಸಿದರು. ನಂತರ ಅಲ್ಲಿಂದ ದೊಡ್ಡಗಂಜೂರು ಗ್ರಾಮಕ್ಕೆ ಭೇಟಿ ನೀಡಿ ಮಳೆ ಕೊರತೆಯಿಂದ ಒಣಗಿರುವ ರಾಗಿ ಮತ್ತು ಮುಸುಕಿನ ಜೋಳ ಬೆಳೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿ.ಪಂ, ಸಿ.ಇ.ಓ ಗುರುದತ್ತ ಹೆಗಡೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here