ಬಸ್ ಪಾಸ್ ಗಾಗಿ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ.

0
51

ಚಿಕ್ಕಬಳ್ಳಾಪುರ /ಚಿಂತಾಮಣಿ: ನಗರದ ಮುಖ್ಯರಸ್ತೆಗಳಲ್ಲಿ ಬಹುಜನ ವಿದ್ಯಾರ್ಥಿ ಸಂಘ ವತಿಯಿಂದ ಉಚಿತ ಬಸ್ ಪಾಸ್ ಗಾಗಿ ಪ್ರತಿಭಟನೆ ನಡೆಸಿದರು.

ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೂ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ್ದ ಬಹುಜನ ವಿದ್ಯಾರ್ಥಿ ಸಂಘದ ಜನಾರ್ಧನ್ ಬಾಬು ಅವರು ಮಾತನಾಡಿ ಮುಖ್ಯಮಂತ್ರಿ ಸಿ.ಎಂ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರದ ಯೋಜನೆಯಾದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು 2018 19 ನೇ ಸಾಲಿಗೂ ವಿಸ್ತರಿಸಿರುವುದು ಸ್ವಾಗತಾರ್ಹ ಕ್ರಮ. ಇದೇ ಸಂದರ್ಭದಲ್ಲಿ ಇತರೆ ಹಿಂದುಳಿದ ಜಾತಿ (OBC) ಮತ್ತು ಧಾರ್ಮಿಕ ಅಲ್ಪಸಂಖ್ಯಾತರ(RM) ಸಮುದಾಯದ ಮತ್ತು ಇತರೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳನ್ನು ಕಡೆಗಣಿಸಿರುವುದು ಖಂಡನಾರ್ಹ. ಸರ್ಕಾರದ ನಿರ್ಧಾರವು ಇತರೆ ಸಮುದಾಯದ ವಿದ್ಯಾರ್ಥಿಗಳು ದಲಿತ ಸಮುದಾಯದ ವಿದ್ಯಾರ್ಥಿಗಳನ್ನು ಅವಮಾನಿಸುವ ಪ್ರತ್ಯೇಕಿಸುವ ಮನೋಭಾವನೆ ಯನ್ನು ಹೊಂದುವಂತೆ ಮಾಡುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರ ದಲಿತ ಮತ್ತು ಹಿಂದುಳಿದ ವರ್ಗದ ಕ್ಷೇಯೋಭಿವೃದ್ಧಿಯನ್ನು ಬಯಸುವುದಾದರೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯನ್ನು ನೀಡುವ”ಬ್ಯಾಕ್ ಲಾಗ್, ಹುದ್ದೆಗಳನ್ನು ಭರ್ತಿ ಮಾಡುವ, ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ಭತ್ಯೆ ಹಾಗೂ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗಾಧಾರಿತ ಗುಣಮಟ್ಟದ ಶಿಕ್ಷಣ ಹಾಗೂ ಪ್ರಾಥಮಿಕ ಶಾಲಾ ಹಂತದಲ್ಲಿ ಇಂಗ್ಲಿಷ್ ಶಿಕ್ಷಣ ನೀಡುವಂತೆ ದಿಟ್ಟ ನಿರ್ಧಾರವನ್ನು ಕೈಗೊಳ್ಳಲಿ. ಇದನ್ನು ಹೊರತು ಪಡಿಸಿ ಸರ್ಕಾರವು ಕೈಗೊಂಡಿರುವ ಇಂತಹ ಯೋಜನೆಗಳಿಂದ ಅನಾನುಕೂಲಗಳೇ ಹೆಚ್ಚಿವೆ ಆದ್ದರಿಂದ ಈ ಸೌಲಭ್ಯವನ್ನು ರಾಜ್ಯದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ವಿಸ್ತರಿಸುವಂತೆ ಬಹುಜನ ವಿದ್ಯಾರ್ಥಿಗಳ ಸಂಘ(BVS) ಒತ್ತಾಯಿಸಿ ಇಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಾಲೂಕು ಕಚೇರಿಯ ಆವರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಮನವಿ ಪತ್ರವನ್ನು ಉಪ ತಹಸಿಲ್ದಾರ್ ಅಣ್ಣಪ್ಪ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕ ಜನಾರ್ದನ್, ತಾಲೂಕು ಅಧ್ಯಕ್ಷ ವಿನೋದ್ ಕುಮಾರ್,ಉಪಾಧ್ಯಕ್ಷ ವೆಂಕಟೇಶ್, ಮುಖಂಡರು ನರಸಿಂಹ ಮೂರ್ತಿ ಸೇರಿದಂತೆ ವಿಧ್ಯರ್ಥಿ- ವಿಧ್ಯರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here