ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ

0
214

ಬಳ್ಳಾರಿ:ನಗರದ ವಾಲ್ಮೀಕಿ ವೃತ್ತದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ನಗರ ಕ್ಷೇತ್ರದ 300 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಕೆಲಸದ ಅಗತ್ಯಾನುಸಾರ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಕೇಂದ್ರದ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಪ್ರಚುರ ಪಡಿಸುವುದರ ಜೊತೆಗೆ ನೆಡುವಂತಹ ಸಾಮಾಜಿಕ ಕಾಳಜಿಯ ಕೆಲಸ ಮಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ ಹೇಳಿದರು.
ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ, ಮಾಜಿ ಶಾಸಕ ನೇಮಿರಾಜ್ ನಾಯ್ಕ್, ಕೆ ರಾಮಲಿಂಗಪ್ಪ, ಗುತ್ತಿಗನೂರು ವಿರುಪಾಕ್ಷಗೌಡ, ಮಾಜಿ ಮೇಯರ್ ಇಬ್ರಾಹಿಂ ಬಾಬು, ಜಿಲ್ಲಾ ಮಹಿಳಾ ಮೋರ್ಚಾದ ಶಶಿಕಲಾ, ಶ್ರೀನಿವಾಸ್ ಮೋತ್ಕರ್, ವೀರಶೇಖಥ್ ರೆಡ್ಡಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here