ಬಿಲ್ ಕಲೆಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ

0
615

ಮಂಡ್ಯ/ಮಳವಳ್ಳಿ ಕಲ್ಕುಣಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಜಯರಾಮ್ ರವರ ಮೇಲೆ ಹಲ್ಲೆ ಮತ್ತು ಕೊಲೆ ಪ್ರಯತ್ನ ನಡೆದಿರುವ ದೌರ್ಜನ್ಯ ಖಂಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಸಿಐಟಿಯು ಮುಖಂಡ ಜಿ ರಾಮಕೃಷ್ಣ ಮಾತನಾಡಿ. ಗ್ರಾಮಪಂಚಾಯಿತಿ ನೌಕರರ ಮೇಲೆ ದೌರ್ಜನ್ಯ ವನ್ನು ನಡೆಸಿದವರ ಮೇಲೆ ಕ್ರಮಕೈಗೊಳ್ಳುವಂತೆ ತಿಳಿಸಿದರು. ಪಿಡಿಓ ಪ್ರಶಾಂತ್ ಬಾಬು ಮಾತನಾಡಿ ಜಯರಾಮು ರವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕೊಲೆ ಪ್ರಕರಣ ದಾಖಲು ಮಾಡಬೇಕು ಗ್ರಾಮ ಪಂಚಾಯಿತಿ ನೌಕರರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದು ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಪರವಾಗಿ ಯೋಜನಾಧಿಕಾರಿ ಬಾಬುಗೆ ಮನವಿ ಸಲ್ಲಿಸಿದರು ನಂತರ ತಾಲ್ಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು ಈ ಪ್ರತಿಭಟನೆಯಲ್ಲಿ ಪಿಡಿಒಗಳಾದ ಪ್ರಶಾಂತ ಬಾಬು, ರುದ್ರಯ್ಯ, ಕುಮಾರ್ ಸೇರಿದಂತೆ ಗ್ರಾಮಪಂಚಾಯಿತಿ ನೌಕರರ ಸಂಘ ಪದಾಧಿಕಾರಿ. ಎಲ್ಲಾ ನೌಕರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here