ಬೀಜದುಂಡೆ ತಯಾರಿಕೆ ಕಾರ್ಯಕ್ರಮ.

0
121

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ತಾಲ್ಲೂಕಿನ ದಿಬ್ಬೂರಹಳ್ಳಿ ಶ್ರೀ ವೆಂಕಟೇಶ್ವರ ಪ್ರೌಢಶಾಲೆ ಆವರಣದಲ್ಲಿ ಶಿಡ್ಲಘಟ್ಟ ವಲಯ ಅರಣ್ಯ ಇಲಾಖೆ, ಯುವಶಕ್ತಿ ಮತ್ತು ಶ್ರೀ ವೆಂಕಟೇಶ್ವರ ಪ್ರೌಢಶಾಲೆ ದಿಬ್ಬೂರಹಳ್ಳಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಬೀಜದುಂಡೆ ತಯಾರಿ ಕಾರ್ಯಕ್ರಮದಲ್ಲಿ ಹೊಂಗೆ, ಬೇವು, ಬಿದಿರು, ಹುಣಸೆ, ಅಶೋಕ, ಶ್ರೀಗಂಧ ಮುಂತಾದ ಬೇರೆ ಬೇರೆ ಜಾತಿ ಬೀಜಗಳನ್ನು ಮಣ್ಣು ಮತ್ತು ಗೊಬ್ಬರದ ಮಿಶ್ರಣಕ್ಕೆ ಸೇರಿಸಿ ಸುಮಾರು ೩೦ ಸಾವಿರ ಬೀಜದುಂಡೆಗಳನ್ನು ತಯಾರಿಸಲಾಯಿತು. ಮುಂದಿನ ದಿನಗಳಲ್ಲಿ ತಲಕಾಯಲಬೆಟ್ಟಗಳ ಸಾಲಿನಲ್ಲಿ ಸಣ್ಣ ಗುಂಡಿ ತೆಗೆದು ನಾಟಿ ಮಾಡಲಾಗುವುದು.

ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು ಹಾಗು ಶಾಲಾ ಮಕ್ಕಳಿಗೆ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿಗಳಾದ ತಿಮ್ಮರಾಯಪ್ಪ, ಉಪವಲಯ ಅರಣ್ಯಾಧಿಕಾರಿಗಳಾದ ರಾಮಾಂಜಿನೇಯುಲು, ಭಾಸ್ಕರ್‌ಬಾಬು, ಅರಣ್ಯ ರಕ್ಷಕರಾದ ಹುಸೇನಿ ನಿಂಬಾಳ್‌, ಶ್ರೀಕಲಾ.
ಯುವಶಕ್ತಿ ಸಂಘಟನೆಯ ಸದಸ್ಯರು, ಶ್ರೀ ವೆಂಕಟೇಶ್ವರ ಪ್ರಾಢಶಾಲೆ ಮುಖ್ಯಶಿಕ್ಷಕರಾದ ಗೋಪಿನಾಥ್‌ ರವರು, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು, ದಿಬ್ಬೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಶ್ರೀ ಜಗದೀಶ್ವರ ಕಾನ್ವೆಂಟ್‌ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಎಸ್‌ಎಂಇ ಕಾನ್ವೆಂಟ್‌ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬೀಜದುಂಡೆಗಳ ತಯಾರಿಕೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here