ಬೃಹತ್ ಸಾಂಸ್ಕೃತಿಕ ಮೇಳ

0
190

ಬಳ್ಳಾರಿ ; ಸ್ವಚ್ಛ ಬಳ್ಳಾರಿ ಅಂಗವಾಗಿ ಬೃಹತ್ ಸಾಂಸ್ಕೃತಿಕ ಮೇಳ ಜೂ.4 ರಂದು ಸ್ವಚ್ಛ ಬಳ್ಳಾರಿ ಅಂಗವಾಗಿ ಸ್ವಚ್ಛತೆ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶ ದಿಂದ ಮಾಹಿತಿ ಜೊತೆಗೆ ಮನರಂಜನೆ ಕಲ್ಪನೆಯೊಂದಿಗೆ ಜಿಲ್ಲಾಡಳಿತದ ವತಿಯಿಂದ ನಗರದ ಕುಮಾರಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ಕುರುಬರ ವಸತಿ ನಿಲಯದ ಆವರಣದಲ್ಲಿ ಜೂ.4 ರಂದು ಸಂಜೆ 6 ಕ್ಕೆ ಸಾಂಸ್ಕøತಿಕ ಬೃಹತ್ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ  ಉದ್ದೇಶದಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಬೀದಿ ನಾಟಕ, ನೃತ್ಯ, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನೂರಾರು ಕಲಾವಿದರು ತಮ್ಮ ಪ್ರತಿಭೆಯನ್ನು ಈ ವೇದಿಕೆ ಅಡಿ ಪ್ರದರ್ಶಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಈ  ಬೃಹತ್ ಸಾಂಸ್ಕøತಿಕ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ ಜಿಲ್ಲಾಧಿಕಾರಿ ಡಾ.ರಾಮ್ ಪ್ರಸಾತ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಿ ಸೈಕಲ್ ಸೇರಿದಂತೆ 50 ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here