ರಸ್ತೆಯಲ್ಲಿ ಈರುಳ್ಳಿ ಸುರಿದು ರೈತರ ಆಕ್ರೋಶ

0
188

ವಿಜಯಪುರ/ ಬಸವನ ಬಾಗೇವಾಡಿ: ತಾಲೂಕಿನ ನಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ಬೆಲೆ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಮೇಲೆ ಈರುಳ್ಳಿ ಚೆಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು . ಈರುಳ್ಳಿ ಬೆಳೆಗೆ ರೂ. 2500 ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಹಸಿರು ಸೇನೆ ಹಾಗೂ ರೈತ ಸಂಘಟನೆಗಳಿಂದ ರಸ್ತೆ ತಡೆ ನಡೆಸಲಾಯಿತು. ಕ್ವಿಂಟಾಲ್‌ ಈರುಳ್ಳಿಗೆ ಕೇವಲ ರೂ. 500 ಇದ್ದು ಇದು ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ರೈತರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲ ಗಂಟೆಯ ಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಗಿತ್ತು. ಸ್ಥಳಕ್ಕೆ ನಿಡಗುಂದಿ ಪೊಲೀಸರ ದೌಡಾಯಿಸಿ ರೈತರ ಮನವೊಲಿಕೆಗೆ ಯತ್ನ ನಡೆಸಿದ್ರು.

LEAVE A REPLY

Please enter your comment!
Please enter your name here