ಮಕ್ಕಳ ಉಜ್ವಲ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಕೊಡಿಸಿ

0
152

ಬೆಂಗಳೂರು ಗ್ರಾಮಾಂತರ/ನೆಲಮಂಗಲ: ಗ್ರಾಮೀಣಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉಜ್ವಲ ಭವಿಷ್ಯ ರೂಪಿಸಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದು ವಿಧಾನಪರಿಷತ್ ಸದಸ್ಯ ಬಿಎಂ.ಎಲ್.ಕಾಂತರಾಜು ತಿಳಿಸಿದರು.
ತಾಲೂಕಿಕ ಅರಿಶಿನಕುಂಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಭಿನ್ನಮಂಗಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್‍ಪುಸ್ತಕ ವಿತರಣೆ ಮಾಡಿ ಮಾತನಾಡಿದರು.
ರಾಷ್ಟ್ರವೊಂದರ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸಲಿದೆ. ಸ್ವತಂತ್ರ ನಂತರಲ್ಲಿ ಶಿಕ್ಷಣ ಕ್ಷೇತ್ರ ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರಗಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿದ್ದು ಎಲ್ಲ ವರ್ಗಗಳಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆವಹಿಸಿವೆ. ಅತ್ಯಾಧುನಿಕ ಶಾಲಾªಕಟ್ಟಡ, ಮೂಲಭೂತ ಸೌಕರ್ಯಗಳ ಮತ್ತು ಪ್ರತಿಭಾವಂತ ಶಿಕ್ಷಕರನ್ನು ನೇಮಕ ಮಾಡುತ್ತಿದೆ. ಆದರೆ ಕೆಲ ಪಾಲಕರು ಆಂಗ್ಲ ಶಿಕ್ಷಣದ ವ್ಯಾಮೋಹಕ್ಕಾಗಿಯೋ, ಪ್ರತಿಷ್ಠೆಗಾಗಿಯೋ ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿಲ್ಲ. ಇದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಶಿಕ್ಷಣಕ್ಕೂ ಆಧ್ಯತೆ ನೀಡುತ್ತಿರುವುದನ್ನು ಪಾಲಕರು ಮನಗಾಣಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಕ ಹಣ ಸುರಿದು ಆರ್ಥಿಕ ಸಮಸ್ಯೆಗೆ ಒಳಗಾಗುವುದನ್ನು ಬಿಡಬೇಕು. ಗ್ರಾಮದಲ್ಲಿ ಸರ್ಕಾರಿ ಶಾಲೆ ನಿರ್ಮಿಸಲು ಸ್ಥಳವನ್ನು ನೀಡಿರುವ ದಾನಿಗಳನ್ನು ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಆಹ್ವಾನನೀಡಿ ಗೌರವಸಲ್ಲಿಸಬೇಕು. ಗ್ರಾಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರು ಬಡಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿವರ್ಷ ನೋಟು ಪುಸ್ತಕ, ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡುವ ಪರಿಪಾಠವನ್ನು ಬೆಳೆಸಿಕೊಂಡು ಬಂದಿರುವುದು ಪ್ರಶಂಸನೀಯವೆಂದರು.
ಗ್ರಾಮದಲ್ಲಿನ ಸರ್ಕಾರಿ ಶಾಲೆ ಖಾಸಗಿ ಶಾಲೆಗಿಂತ ಕಡಿಮೆ ಇರಬಾರದೆಂದು ಭಾವಿಸಿ ಶಾಲೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಶಾಲೆಯಲ್ಲಿ ಮಕ್ಕಳು ಸೌಲಭ್ಯಗಳನ್ನು ಬಳಿಸಿಕೊಂಡು ಒಳ್ಳೆಯ ವಿದ್ಯಾಬ್ಯಾಸ ಮಾಡಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯ ವಾಸು ತಿಳಿಸಿದರು.
ಸಂಧರ್ಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ವೆಂಕಟೆಗೌಡ, ಗ್ರಾಮಪಂಚಾಯಿತಿ ಸದಸ್ಯ ಲಕ್ಷ್ಮೀಕಾಂತ್, ಹನುಮಂತರಾಜು, ಮುಖಂಡ ಜಯಣ್ಣ, ಬಿಎಂ.ಶ್ರೀನಿವಾಸ್, ಮೋಹನ್, ಜಗಜ್ಯೋತಿ,ಸುನೀಲ್, ಮಾಯಣ್ಣಗೌಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಸಿ.ಆರ್.ಪಿ. ನಾಗರಾಜು, ಸಹಶಿಕ್ಷಕಿ ಸಿ.ಆರ್.ಲತಾ. ಎಸ್.ರೂಪಾ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here