ಮತಯಂತ್ರ ಬಳಕೆ ತರಬೇತಿ…

0
135

ಚಿಕ್ಕಬಳ್ಳಾಪುರ/ಚಿಂತಾಮಣಿ:-ನಗರಸಭೆ ಸಭಾಂಗಣದಲ್ಲಿ ವಿವಿ ಪ್ಯಾಟ್ ಮತ ಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ಹಾಗೂ ಅಧಿಕಾರಿಗಳಿಗೆ ಚುನಾವಣಾಧಿಕಾರಿಗಳು ತರಬೇತಿ ನೀಡಿದರು.

ನಗರ ಸಭೆ ಸಭಾಂಗಣದಲ್ಲಿ ತಾಲೂಕು ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ 2018ರ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಮತಯಂತ್ರ ಬಳಕೆ ಹಾಗೂ ‌ಮತ ಖಾತರಿಪಡಿಸುವ ವಿವಿ ಪ್ಯಾಟ್ ಮತದಾನ ಯಂತ್ರಗಳ ಉಪಯೋಗ ಹಾಗೂ ನೀತಿ ಸಂಹಿತೆ ಕುರಿತು ಚುನಾವಣಾಧಿಕಾರಿ ಸವಿತಾರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಪ್ರಾತ್ಯಕ್ಷಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಪಕ್ಷದ ಮುಖಂಡರು ಸಭೆ ಸಮಾರಂಭಗಳನ್ನು ಮಾಡಬೇಕಾದರೆ ಚುನಾವಣೆ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ ಸಭೆ-ಸಮಾರಂಭಗಳನ್ನು ಆಯೋಜನೆ ಮಾಡುವ 48 ಗಂಟೆಗಳ ಒಳಗಾಗಿ ಅನುಮತಿ ಪಡೆದು ಕಾರ್ಯಕ್ರಮ ನಡೆಸಬೇಕು. ಒಂದು ವೇಳೆ ಅನುಮತಿ ಪಡೆಯದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದರೆ ಅಂತಹ ಅಭ್ಯರ್ಥಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿ ಸವಿತಾ ಎಚ್ಚರಿಸಿದರು.ವಿಧಾನಸಭೆ ಚುನಾವಣೆಯಲ್ಲಿ ಶಾಂತಿಯಿಂದ ನಡೆಸಲು ಭಾರತ ಚುನಾವಣಾ ಆಯೋಗ ಹಲವಾರು ರೀತಿಯಲ್ಲಿ ಯೋಜನೆಗಳನ್ನು ರೂಪಿಸಿದೆ. ಯಾವುದೇ ಪಕ್ಷದ ಮುಖಂಡರು ಚುನಾವಣಾ ನೀತಿ ಸಂಹಿತೆ ಜಾರಿಯಾದ ಕೂಡಲೇ ಸಭೆ ಸಮಾರಂಭಗಳನ್ನು ಆಯೋಜನೆ ಮಾಡಲು ಹಾಗೂ ವಾಹನಗಳಿಗೆ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ಸಭೆ-ಸಮಾರಂಭಗಳನ್ನು ನಡೆಸುವುದು ಅಪರಾಧವಾಗಿದೆ. ಅಂತಹವರ ವಿರುದ್ಧ ಕಾನೂನಿನ ರೀತಿ ಸೂಕ್ತ ಕ್ರಮ ಜರುಗಿಸಲಾಗುವುದು.ಶಾಂತಿ ಸುವ್ಯವಸ್ಥೆಯಿಂದ ಚುನಾವಣೆ ನಡೆಸಲು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಸವಿತಾ, ತಹಶಿಲ್ದಾರ ವಿಶ್ವನಾಥ್ ,ಇಒ ಶ್ರೀನಿವಾಸ್, ಪೌರಾಯುಕ್ತ ಪ್ರಸಾದ್, ಮೀನುಗಾರಿಕೆ ಇಲಾಖೆಯ ನಾಗೇಂದ್ರ ಬಾಬು , ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here