ಮನೆ ಮನೆಗೆ ಬಿಜೆಪಿ ಕಾರ್ಯಕ್ರಮ…

0
90

ಚಿಕ್ಕಬಳ್ಳಾಪುರ/ ಚಿಂತಾಮಣಿ:-ನಗರದ ತಾಲ್ಲೂಕು ಕಛೇರಿಯ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಮಾಡಿಕೆರೆ ಅರುಣ್ ಬಾಬು ರವರ ನೇತೃತ್ವದಲ್ಲಿ ಮನೆ ಮನೆಗೆ ಬಿಜೆಪಿ ಮತ್ತು ದೋಸೆ ಪೇ ಚರ್ಚಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಬಿಜೆಪಿ ಮುಖಂಡ ಅರುಣ್ ಬಾಬು ರವರು ಮಾತನಾಡಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಬಡವರ ಸರ್ಕಾರವೆಂದು ಬೊಗಳೆ ಬಿಡುತ್ತಿದೆ, ಆದರೆ ವಾಸ್ತವವಾಗಿ ಹಳ್ಳಿಗಾಡು ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಸ್ವಚ್ಛತೆ ಹಾಗೂ ನೀರಿನ ಸೌಲಭ್ಯವಿಲ್ಲದೆ ವಂಚನೆಗೊಳಗಾಗಿ ಜನರು ಪರದಾಡುವಂತಾಗಿದೆ ಎಂದರು.

ದೇಶದಲ್ಲಿ ನಮ್ಮ ಪ್ರಧಾನ ಮಂತ್ರಿಗಳು ಜನಪರ ಯೋಜನೆಗಳನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಹೀಗಾಗಿ ಚಿಂತಾಮಣಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲುವಂತೆ ಮಾಡಿದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ರವರು ಆಗುವುದು ಎಂದರು .

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಚಾಲಕ ಸುರೇಂದ್ರ ಗೌಡ , ಅಪ್ಪಾಜಿ ಗೌಡ ,ಕುರುಬರ ರಾಜು ,ಶೋಭಾರಾಣಿ,ಶ್ರೀನಿವಾಸ ,ರಾಜಣ್ಣ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here