ಮಲೇರಿಯಾ, ಡೆಂಗ್ಯೂ ಬಗ್ಗೆ ಜನ ಜಾಗೃತಿ ಅಭಿಯಾನ.

0
140

ಶಿವಮೊಗ್ಗ:ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳಾದ ಡಾ||ಎಂ. ಲೋಕೇಶ್‌ರವರು ಮಲೇರಿಯಾ, ಡೆಂಗ್ಯೂ, ಜ್ವರದ ಬಗ್ಗೆ ಜನ ಜಾಗೃತಿ ಮೂಡಿಸಲು ಅಭಿಯಾನಕ್ಕೆ ಚಾಲನೆ ನೀಡಿದರು. ಸ್ವಂತ ಅವರೇ ವಿವಿಧ ಬಡಾವಣೆಗಳಲ್ಲಿ ಅಧಿಕಾರಿಗಳೊಂದಿಗೆ, ಜನಪ್ರತಿನಿಧಿಗಳೊಂದಿಗೆ ಸಂಚರಿಸಿದರು. 

ಪಂಚವಟಿ ಕಾಲೋನಿ, ಮಾಡ್ರನ್ ಟಾಕೀಸ್ ಹಿಂಭಾಗದ ಕೊಳಚೆ ಪ್ರದೇಶಗಳಲ್ಲಿ ಅಭಿನಯ ಕಾರ್ಯಕ್ರಮದ ಮೂಲಕ ಜನರಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದರು. ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಲು ಚರಂಡಿಗಳಲ್ಲಿ ನೀರು ಹರಿದು ಹೋಗುವಂತೆ ಹಾಗೂ ಕೊಳಚೆ ಸಂಗ್ರಹವಾಗದಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here