ಮಹರ್ಷಿ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ

0
820

ಬಳ್ಳಾರಿ /ಹೊಸಪೇಟೆ. ಬೆಂಗಳೂರಿನ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ತಪೋವನದಲ್ಲಿ ಅ.5 ರಂದು ಮಹರ್ಷಿ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ ಸಮಾರಂಭ ಜರುಗಲಿದೆ.

ಸ್ಥಳೀಯ ಅಮರಾವತಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿ ಮಾತನಾಡಿದ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ತಿಕೋಟಿ ವಿರೇಂದ್ರ ಸಿಂಹ ಈ ವಿಷಯ ತಿಳಿಸಿದರು.
ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಅಂಗವಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೇತೃತ್ವದಲ್ಲಿ ನಿರ್ಮಿಸಲಾಗಿರುವ ಅಂದಾಜು 35 ರಿಂದ 40 ಲಕ್ಷ ವೆಚ್ಚದ, 12 ಅಡಿ ಎತ್ತರದ, 25 ಟನ್ ತೂಕದ ವಾಲ್ಮೀಕಿ ಶಿಲಾಮೂರ್ತಿ ಯನ್ನು ಭೂಮಿಯಿಂದ 30 ಅಡಿ ಎತ್ತರದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು. ವಾಲ್ಮೀಕಿ ತಪೋವನದ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 1 ಕೋಟಿ ರೂ ನೀಡಿದೆ.
ಅಲ್ಲದೆ ಸಮಾರಂಭದಲ್ಲಿ ಮೀಸಲಾತಿ ಹೆಚ್ಚಳ, ನಕಲಿ ಜಾತಿ ಪ್ರಮಾಣ ಪತ್ರ ತಡೆಯುವುದು. ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ದಾವಣಗೇರೆ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಒಂದು ಲಕ್ಷಕ್ಕೂ ಅಧಿಕ ವಾಲ್ಮೀಕಿ ಸಮಾಜದ ಬಂಧುಗಳು ಭಾಗವಹಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದರು.
ಈ ಕುರಿತು ಈಗಾಗಲೇ ಚಿತ್ರದುರ್ಗ, ದಾವಣಗೇರೆ, ಹಾವೇರಿ, ಗದಗ, ಗುಲ್ಬರ್ಗಾ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಸೇರಿದಂತೆ 16 ಜಿಲ್ಲೆಗಳ ಪ್ರವಾಸ ಕೈಗೊಂಡು ಕಾರ್ಯಕ್ರಮದ ಪ್ರಚಾರ ನಡೆಸಿದ್ದು. ಬಳ್ಳಾರಿಯಲ್ಲಿ ತಮ್ಮ ಪ್ರವಾಸ ಅಂತ್ಯಗೊಳ್ಳಲಿದೆ ಎಂದರು.
ವಾಲ್ಮೀಕಿ ಜಯಂತಿ ಹಾಗೂ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ರಾಜ್ಯದ ನಾಲ್ಕು ದಿಕ್ಕುಗಳಿಂದ ಜ್ಯೋತಿ ಯಾತ್ರೆ ದಿ.ಸೆ.24 ರಿಂದ ಆರಂಭಗೊಳ್ಳಲಿದ್ದು. ಅ.4 ರಂದು ಬೆಂಗಳೂರು ತಲುಪಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಅಣಜಿ ಅಂಜಿನಪ್ಪ, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಬಿ.ಎಸ್.ಜಂಬಯ್ಯ ನಾಯಕ, ಮುಖಂಡ ಜಿ.ಕೆ.ಹನುಮಂತಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ಕಿಚಿಡಿ ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿ ಪೂಜಾರಿ ವೆಂಕೋಬನಾಯಕ, ಜಿಲ್ಲಾಧ್ಯಕ್ಷೆ ಶಕುಂತಲಾ ಶಿವಪ್ಪ, ನಗರಸಭೆ ಸದಸ್ಯ ಗಿಂಜಿ ಮಂಜುನಾಥ, ಮುಖಂಡರಾದ ನಾರಾಯಣಪ್ಪ, ಕಣ್ಣಿ ಶ್ರೀಕಂಠ, ಕಟಿಗಿ ಜಂಬಯ್ಯ ನಾಯಕ, ಸುನೀಲ್, ಕಟಿಗಿ ವಿಜಯ ಕುಮಾರ ಉಪಸ್ಥಿತರಿದ್ದರು,

LEAVE A REPLY

Please enter your comment!
Please enter your name here