ಮಾಜಿ ಶಾಸಕರ ಗ್ರಾಮ ವಾಸ್ತವ್ಯ

0
124

ಮಂಡ್ಯ/ಮಳವಳ್ಳಿ: ಪಕ್ಷದ ಸಂಘಟನೆಗಾಗಿ ಗ್ರಾಮ ವಾಸ್ತವ್ಯವನ್ನು ಮಾಡಿ ಗ್ರಾಮದ ಜನರ ಕಷ್ಟಸುಖಗಳನ್ನು ತಿಳಿದು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ಡಾ.ಕೆ ಅನ್ನದಾನಿ ತಿಳಿಸಿದರು . ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದಲ್ಲಿ ಗ್ರಾಮ ವಾಸ್ತವ್ಯ ಹೂಡಿ ನಂತರ ಮಾತನಾಡಿದ ಅವರು ಜೆಡಿಎಸ್ ಪಕ್ಷ ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಲಾಗುವುದು. ಜೊತೆಗೆ ಪಕ್ಷವನ್ನು ಅಧಿಕಾರಿಕ್ಕೆ ಹೋರಾಟ ಮಾಡುವುದಾಗಿ ತಿಳಿಸಿದ ಅವರು ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ಮುಖ್ಯಮಂತ್ರಿ ಯಾಗಿದ್ದಾಗ ಗ್ರಾಮ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಬಗೆಹರಿಸುವ ನಿಟ್ಟಿನಲ್ಲಿ ಉತ್ತಮ ಆಡಳಿತ ನಡೆಸಿದರು. ಎಂದರು ಕಾಯ೯ಕ್ರಮ ದಲ್ಲಿ ಜಿ.ಪಂ ಅಧ್ಯಕ್ಷೆ ಪ್ರೇಮಕುಮಾರಿ, ಜಿ.ಪಂ ಸದಸ್ಯ ಹಾಗೂ ಜೆಡಿಎಸ್ ಅಧ್ಯಕ್ಷ ರವಿ, ರಾಜಣ್ಣ, ನಟೇಶ್ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಇದ್ದರು

LEAVE A REPLY

Please enter your comment!
Please enter your name here