ಮೀನು ಹಿಡಿಯಲು ಹೋಗಿ ಇಬ್ಬರು ಬಾಲಕರು ಸಾವು…

0
163

ವಿಜಯಪುರ:ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ದೊಡ್ಡ ಕೆರೆಯಲ್ಲಿ ನಡೆದಿದೆ. ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. ಮೃತರಿಬ್ಬರು ಮುದ್ದೇಬಿಹಾಳ ಪಟ್ಟಣದ ನಿವಾಸಿಗಳಾಗಿದ್ದು, ಲೊಕೇಶ ತಟ್ಟಿ(12)ಬಾಲಕನ ಶವ ಪತ್ತೆ, ಇನ್ನೋರ್ವ ಬಾಲಕನ ಶವಕ್ಕಾಗಿ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ನಮ್ಮೂರು ಟಿವಿ ನಂದೀಶ ಹಿರೇಮಠ

LEAVE A REPLY

Please enter your comment!
Please enter your name here