ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ

0
268

ಬಳ್ಳಾರಿ /ಹೊಸಪೇಟೆ: 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬಲಿಜ ಸಮಾಜದವರು ನಗದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು, ಈ ಹಿಂದೆ ಬಲಿಜ ಸಮಾಜಕ್ಕೆ ನೀಡಲಾಗಿದ್ದ 2ಎ ಮೀಸಲಾತಿ ಪುನಃ ನೀಡುವಂತೆ ಸಾವಿರಾರು ಜನರು ಪ್ರತಿಭಟನೆಯಲ್ಲಿ ಆಗ್ರಹಿಸಿದರು. ಹೊಸಪೇಟೆಯ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ತಹಶೀಲ್ದಾರ್‌ ಕಚೇರಿವರೆಗೆ ನಡೆಯಿತು. ಶಾನಭಾಗ ವೃತ್ತದಲ್ಲಿ ಸುಮಾರು ಒಂದು ಗಂಟೆ ಕಾಲ ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಸಿಎಂ ಸಿದ್ದರಾಮಯ್ಯ ಬಲಿಜ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಬಲಿಜ ಸಮಾಜ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ, ಇದೇ ತಿಂಗಳು 28ರಂದು ಬೆಂಗಳೂರಿನಲ್ಲಿ ಮೀಸಲಾತಿಗೆ ಒತ್ತಾಯಿಸಿ ಬಲಿಜ ಸಮಾಜ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಿದೆ.

LEAVE A REPLY

Please enter your comment!
Please enter your name here